ಮರಕ್ಕೆ ಕಾರು ಢಿಕ್ಕಿ: ಓರ್ವ ಮೃತ್ಯು
Update: 2016-07-26 22:17 IST
ಮಂಗಳೂರು, ಜು. 26: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಬಡಗ ಎಡಪದವಿನ ಬಳಿ ಕಾರೊಂದು ಮರವೊಂದಕ್ಕೆ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಜೋಕಟ್ಟೆ ನಿವಾಸಿ ಮುನೀರ್ (23) ಎಂದು ಗುರುತಿಸಲಾಗಿದೆ.
ಕಾರು ಚಲಾಯಿಸುತ್ತಿದ್ದ ನಝೀರ್ ಎಂಬಾತನ ನಿಯಂತ್ರಣ ಕಳೆದುಕೊಂಡು ಕಾರು ರಸ್ತೆ ಬದಿಗೆ ಹಾದು ಹೋಗಿ ಮರಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.