ಕುರ್ಚಿಪಳ್ಳ: ಯುವಕ ಆತ್ಮಹತ್ಯೆ
Update: 2016-07-26 23:55 IST
ವಿಟ್ಲ, ಜು.26: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ನರಿಕೊಂಬು ಗ್ರಾಮದ ಕುರ್ಚಿಪಳ್ಳ ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ. ಮೃತರನ್ನು ಇಲ್ಲಿನ ನವಜೀವನ ವ್ಯಾಯಾಮ ಶಾಲಾ ಬಳಿ ನಿವಾಸಿ ಸುಂದರ ಮೂಲ್ಯ ಎಂಬವರ ಪುತ್ರ, ಪಿಗ್ಮಿ ಸಂಗ್ರಾಹಕ ಅಜಿತ್ ಕುಮಾರ್ (28) ಎಂದು ಗುರುತಿಸಲಾಗಿದೆ. ಕಲ್ಲಡ್ಕದಲ್ಲಿ ಪಿಗ್ಮಿ ಸಂಗ್ರಾಹಕರಾಗಿದ್ದ ಇವರು ಸೋಮವಾರ ಸಂಜೆ ಮನೆಯ ಬಚ್ಚಲು ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರ್ಥಿಕ ಅಡಚಣೆಯೇ ಕೃತ್ಯಕ್ಕೆ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ.