ರಾಷ್ಟ್ರೀಯ ಯುವಪ್ರಶಸ್ತಿಗೆ ಅರ್ಜಿ ಆಹ್ವಾನ
Update: 2016-07-26 23:57 IST
ಉಡುಪಿ, ಜು.26: ಯುವಜನ ಸೇವೆ, ರಾಷ್ಟ್ರೀಯ ಅಭಿವೃದ್ಧಿ ಮತ್ತು ಸಮಾಜ ಸೇವಾಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ 15ರಿಂದ 29 ವರ್ಷ ವಯೋ ಮಿತಿಯ ಯುವಕ, ಯುವತಿಯರಿಗೆ ಹಾಗೂ ಯುವಕ, ಯುವತಿ ಸಂಘಗಳಿಗೆ ವೈಯಕ್ತಿಕ ಮತ್ತು ಸಾಂಘಿಕ ರಾಷ್ಟ್ರೀಯ ಯುವ ಪ್ರಶಸ್ತಿ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆ.16 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತ ಯುವಕ/ಯುವತಿ ಸಂಘದ ಸದಸ್ಯರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣ, ಅಜ್ಜರಕಾಡು, ಉಡುಪಿ ಜಿಲ್ಲೆ ಇವರನ್ನು ಅಥವಾ ದೂರವಾಣಿ ಸಂಖ್ಯೆ: 0820-2521324ನ್ನು ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.