ಹಾಸನ: ಮಹಾದಾಯಿ ನದಿ ನೀರನ್ನು ಕರ್ನಾಟಕಕ್ಕೆ ಬಿಡಲು ಆಗ್ರಹಿಸಿ ರಾಜ್ಯ ರೈತ ಸಂಘದಿಂದ ಧರಣಿ
Update: 2016-07-28 18:49 IST
ಹಾಸನ, ಜು.28: ಟಿಎಂಸಿ ಮಹಾದಾಯಿ ನದಿ ನೀರನ್ನು ಕರ್ನಾಟಕಕ್ಕೆ ಬಿಡಲು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಧರಣಿ ನಡೆಸಲಾಯಿತು.
ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಮೆರವಣಿಗೆ ಹೊರಟ ಧರಣಿನಿರತರು, ಎನ್.ಆರ್. ವೃತ್ತದ ಮೂಲಕ ಜಿಲ್ಲಾಡಳಿತ ಆವರಣಕ್ಕೆ ಬಂದು, ನ್ಯಾಯಾಧೀಕರಣದ ಮುಂದೆ ಸಲ್ಲಿಸಲಾಗಿದ್ದ ಅರ್ಜಿಯನ್ನು ವಜಾ ಮಾಡಲಾಗಿರುವುದನ್ನು ಖಂಡಿಸಿದರು. ಚನ್ನರಾಯಪಟ್ಟಣದ ರೈತ ಮುಖಂಡರುಗಳು ಜಿಲ್ಲಾ ಕೇಂದ್ರಕ್ಕೆ ಆಗಮಿಸಿ ಧರಣಿ ನಡೆಸಿದರು. ಮಹಾರಾಷ್ಟ್ರ, ಗೋವಾ ಮತ್ತು ಕರ್ನಾಟಕ ರಾಜ್ಯಗಳ ಸಮನ್ವಯ ಸಮಿತಿ ರಚಿಸಬೇಕು. ಕುಡಿಯುವ ನೀರಿಗಾಗಿ ಯಾವ ರಾಜಕಾರಣಿಗಳು ರಾಜಕೀಯ ಮಾಡಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಧರಣಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಕಾರ್ಯದರ್ಶಿ ಆನೆಕೆರೆ ರವಿ, ಮೀಸೆ ಮಂಜಣ್ಣ, ಆರೆವಳ್ಳಿ ಮಂಜುನಾಥ್, ಬಾಬು, ಸಿದ್ದಪ್ಪ, ವಿಠಲ, ರಾಜಣ್ಣ ಇತರರು ಪಾಲ್ಗೊಂಡಿದ್ದರು.