×
Ad

ಸ್ವಾತಂತ್ರ ದಿನಾಚರಣೆಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ: ಜಿಲ್ಲಾಧಿಕಾರಿ ಎಸ್.ಎಸ್.ನಕುಲ್

Update: 2016-07-28 21:46 IST

ಕಾರವಾರ, ಜು.28: ಆಗಸ್ಟ್ 15ರಂದು ಜಿಲ್ಲಾ ಮಟ್ಟದಲ್ಲಿ ನಡೆಯುವ ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ಸ್ವಯಂಪ್ರೇರಣೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಮನವಿ ಮಾಡಿದರು.

ಸ್ವಾತಂತ್ರ ದಿನಾಚರಣೆ ಕುರಿತು ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.

ಸ್ವಾತಂತ್ರ ಸಂಭ್ರಮದಲ್ಲಿ ಎಲ್ಲರೂ ಒಟ್ಟಾಗಿ ಭಾಗವಹಿಸಬೇಕು. ಸ್ವಾತಂತ್ರೋತ್ಸವ ಸಮಾರಂಭ ಕೇವಲ ಇಲಾಖಾ ಅಧಿಕಾರಿಗಳಿಗೆ, ಶಾಲಾ ಮಕ್ಕಳಿಗೆ ಮಾತ್ರ ಸೀಮಿತವಾಗಬಾರದು. ಜಿಲ್ಲಾ ಇಲಾಖಾ ಸಿಬ್ಬಂದಿ, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸಬೇಕು. ಸ್ವಾತಂತ್ರ ದಿನಾಚರಣೆಯಂದು ಬೆಳಗ್ಗ್ಗೆೆ 7:30ಕ್ಕೆ ಎಲ್ಲ ಕಚೇರಿಗಳಲ್ಲಿ, ಶಾಲಾ ಕಾಲೇಜುಗಳಲ್ಲಿ ಧ್ವಜಾರೋಹಣ ನೆರವೇರಿಸಬೇಕು. ಪೊಲೀಸ್ ಪರೇಡ್ ಮೈದಾನದಲ್ಲಿ ಬೆಳಗ್ಗೆ 9ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಿ ಭಾಷಣ ಮಾಡುವರು. ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಮೈದಾನದಲ್ಲಿ ನಡೆಯಲಿವೆ. ಸಂಜೆ ರಂಗಮಂದಿರದಲ್ಲಿ ಶಾಲಾ ಮಕ್ಕಳ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದರು. ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಪರೇಡ್‌ನಲ್ಲಿ ಭಾಗವಹಿಸುವ ಎಲ್ಲ ಶಾಲಾ ಕಾಲೇಜು ಮಕ್ಕಳಿಗೆ ಬೆಳಗ್ಗಿನ ಉಪಾಹಾರದ ವ್ಯವಸ್ಥೆ ಮಾಡಬೇಕು. ನೌಕಾ ಪಡೆ ಬ್ಯಾಂಡ್ ಸ್ವಾತಂತ್ರ ದಿನಾಚರಣೆಯಲ್ಲಿ ಕಾರ್ಯಕ್ರಮ ನೀಡಲಿದೆ. ಪರೇಡ್‌ನಲ್ಲಿ ನೌಕಾಪಡೆಯ ತುಕಡಿ ಸಹ ಭಾಗವಹಿಸುವಂತೆ ಅವರು ಮನವಿ ಮಾಡಿದರು. ಎಲ್ಲ ಇಲಾಖಾ ಕಚೇರಿಗಳಲ್ಲಿ ದೀಪಾಲಂಕಾರ ಮಾಡಬೇಕು. ಸಾರ್ವಜನಿಕರು ಸಹ ಸ್ವಯಂ ಪ್ರೇರಣೆಯಿಂದ ತಮ್ಮ ಅಂಗಡಿ ಮುಂಗಟ್ಟುಗಳನ್ನು ಅಲಂಕರಿಸಬೇಕು. ನಗರದ ಸ್ವಚ್ಛತೆ, ಕಾರ್ಯಕ್ರಮದಲ್ಲಿ ನೀರಿನ ವ್ಯವಸ್ಥೆ ಇತ್ಯಾದಿಗಳನ್ನು ನಗರಸಭೆ ವತಿಯಿಂದ ಮಾಡುವಂತೆ ಅವರು ಸೂಚಿಸಿದರು.

ಕನ್ನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಹಿರೇಗೌಡರ್ ಸ್ವಾಗತಿಸಿದರು. ಅಪರ ಜಿಲ್ಲಾಧಿಕಾರಿ ಎಚ್.ಪ್ರಸನ್ನ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News