ಮೈಸೂರಿನಲ್ಲಿಯೇ ವಿಷ್ಣು ಸ್ಮಾರಕ: ಭಾರತಿ ವಿಷ್ಣುವರ್ಧನ್
Update: 2016-07-29 00:11 IST
ಬೆಂಗಳೂರು, ಜು.28: ವಿಷ್ಣು ಸ್ಮಾರಕವನ್ನು ಮೈಸೂರಿನಲ್ಲಿಯೇ ನಿರ್ಮಾಣ ಮಾಡಲಾಗುತ್ತದೆ ಎಂದು ಭಾರತಿ ವಿಷ್ಣುವರ್ಧನ್ ಪುನರುಚ್ಚರಿಸಿದ್ದಾರೆ.
ನಗರದಲ್ಲಿಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಭಾರತಿ ಅವರು, ವಿಷ್ಣುವರ್ಧನ್ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಾಣ ಮಾಡಲು ತೀರ್ಮಾನಿಸಿದ್ದಾಗಿದೆ. ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣ ವಿಚಾರದಲ್ಲಿ ಕೆಲವು ಅಭಿಮಾನಿಗಳು ವಿರೋಧ ವ್ಯಕ್ತಪಡಿಸಿ, ಸ್ಮಾರಕ ನಿರ್ಮಾಣಕ್ಕೆ ಅಡ್ಡಿಪಡಿಸುತ್ತಿದ್ದಾರೆಯೇ ಹೊರತು ನಿಜವಾದ ಅಭಿಮಾನಿಗಳು ವಿರೋಧ ಮಾಡುತ್ತಿಲ್ಲ ಎಂದರು.