ಬ್ಯಾರೀಸ್ ಪ್ರಥಮದರ್ಜೆ ಕಾಲೇಜಿನ ವಾಣಿಜ್ಯ ಸಂಘ ಉದ್ಘಾಟನೆ
ಮಂಗಳೂರು, ಜು.29: ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜು, ಇದರ ವಾಣಿಜ್ಯ ವಿಭಾಗದ ವತಿಯಿಂದ ಆಯೋಜಿಸಲಾಗಿದ್ದ ಕಾಮರ್ಸ್ ಅಸೋಸಿಯೇಷನ್‌ನ ಉದ್ಘಾಟನಾ ಸಮಾರಂಭ ಗುರುವಾರ ನಡೆಯಿತು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕೋಟ-ಪಡುಕೆರೆಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗ ಮುಖ್ಯಸ್ಥ ಪ್ರೊ. ನಾಗರಾಜ್ ಯು. ಮಾತನಾಡಿ, ಪದವಿಯ ನಂತರ ವಿದ್ಯಾರ್ಥಿಗಳಿರುವ ಕೋರ್ಸುಗಳಾದ ಕಂಪೆನಿ ಸೆಕ್ರೆಟರಿ, ಕಾಸ್ಟ್ ಆ್ಯಂಡ್ ಮ್ಯಾನೇಜ್‌ಮೆಂಟ್ ಅಕೌಂಟೆಂಟ್, ಆಕ್ಚುವರೀಸ್ ಕೋರ್ಸ್, ಮಾಸ್ಟರ್ ಆಫ್ ಬ್ಯುಸಿನೆಸ್ ಲಾ, ಚಾರ್ಟರ್ಡ್ ಅಕೌಂಟೆಂಟ್, ಸಿಐಎಂಎಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಸಂಸ್ಥೆಯ ಅಧ್ಯಕ್ಷ ಹಾಜಿ ಮಾಸ್ಟರ್ ಮೆಹಮೂದ್ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಶಮೀರ್, ವಾಣಿಜ್ಯ ವಿಭಾಗದ ಮುಖ್ಯಸ್ಥೆ ಮಾಲತಿ ಉಪಸ್ಥಿತರಿದ್ದರು.
ಪ್ರಥಮ ಬಿ.ಕಾಂ. ವಿದ್ಯಾರ್ಥಿನಿ ಕವನಾ ಸ್ವಾಗತಿಸಿದರು. ದ್ವಿತೀಯ ಬಿ.ಕಾಂ. ವಿದ್ಯಾರ್ಥಿನಿ ವಿಶ್ವತಿ ವಂದಿಸಿದರು. ತೃತೀಯ ಬಿ.ಕಾಂ. ವಿದ್ಯಾರ್ಥಿನಿ ಅರ್ಪಿತಾ ಕಾರ್ಯಕ್ರಮ ನಿರೂಪಿಸಿದರು.