ಶಿವಮೊಗ್ಗ: ಜಿಪಂ ಸದಸ್ಯರಿಗೆ ಮಾಹಿತಿ ಕಾರ್ಯಾಗಾರ
Update: 2016-07-29 22:16 IST
ಶಿವಮೊಗ್ಗ, ಜು. 29: ಜಿಲ್ಲಾ ಪಂಚಾಯತ್ ನೂತನ ಸದಸ್ಯರಿಗೆ ಜಿಪಂ ವ್ಯಾಪ್ತಿಯಡಿ ಬರುವ ಇಲಾಖೆಗಳು, ಯೋಜನೆಗಳು,
ಅಭಿವೃದ್ಧಿ ಕಾರ್ಯ ಚಟುವಟಿಕೆಗಳ ಬಗ್ಗೆ ಒಂದು ದಿನದ ಮಾಹಿತಿ ಕಾರ್ಯಾಗಾರವನ್ನು ನಗರದ ಜಿಪಂ ಸಭಾಂಗಣದಲ್ಲಿ ನಡೆಸಲಾಯಿತು. ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಜಿಪಂನ ವಿವಿಧ ವಿಭಾಗಗಳ ಮುಖ್ಯಸ್ಥರು ತಮ್ಮ ಇಲಾಖೆ-ವಿಭಾಗದಡಿ ಅನುಷ್ಠಾನ ಮಾಡಲಾಗುತ್ತಿರುವ ಯೋಜನೆಗಳು, ಅನುದಾನದ ಲಭ್ಯತೆ, ಫಲಾನುಭವಿಗಳ ಆಯ್ಕೆ, ಜಿಪಂ ಸದಸ್ಯರ ಸಹಭಾಗಿತ್ವದಲ್ಲಿ ನಡೆಯುವ ಫಲಾನುಭವಿಗಳ
ಆಯ್ಕೆಪ್ರಕ್ರಿಯೆ ಸೇರಿದಂತೆ ಮತ್ತಿತರ ವಿಷಯಗಳ ಕುರಿತಂತೆ ಸಮಗ್ರ ಮಾಹಿತಿ ನೀಡಿದರು. ಈ ಕಾರ್ಯಾಗಾರದ ಅಧ್ಯಕ್ಷತೆಯನ್ನು ಜಿಪಂ ಅಧ್ಯಕ್ಷೆ ಜ್ಯೋತಿ ಎಸ್. ಕುಮಾರ್ ವಹಿಸಿದ್ದರು. ಸಿಇಒ ಕೆ.ರಾಕೇಶ್‌ಕುಮಾರ್, ಉಪಾಧ್ಯಕ್ಷೆ ವೇದಾ ವಿಜಯಕುಮಾರ್ ಸೇರಿದಂತೆ ಸ್ಥಾಯಿ ಸಮಿತಿಯ ಅಧ್ಯಕ್ಷರು,
ಎಲ್ಲ ಪಕ್ಷಗಳ ಸದಸ್ಯರು, ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದರು.