×
Ad

ಬಹುಮಹಡಿ ಕಟ್ಟಡ ನಿರ್ಮಾಣಕ್ಕೆ ಲಂಚ ಪಡೆದು ಪರವಾನಿಗೆ ತನಿಖೆಗೆ ಡಿಸಿ ಆದೇಶ ನೀಡಲಿ: ಎನ್. ದತ್ತಾ

Update: 2016-07-29 22:24 IST

ಕಾರವಾರ,ಜು.29: ನಗರಸಭೆ ಅಧಿಕಾರಿಗಳು ಲಂಚ ಪಡೆದು ಕಾನೂನು ಬಾಹಿರವಾಗಿ ಬಹುಮಹಡಿ ಕಟ್ಟಡಗಳ ನಿರ್ಮಾಣಕ್ಕೆ ಬೇಕಾಬಿಟ್ಟಿಗಾಗಿ ಪರವಾನಿಗೆ ನೀಡುತ್ತಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿ ಮಧ್ಯಪ್ರವೇಶ ಮಾಡಿ ತನಿಖೆಗೆ ಆದೇಶ ನೀಡಬೇಕು ಎಂದು ಕರುನಾಡು ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಎನ್. ದತ್ತಾ ಪತ್ರಿಕಾಗೋಷ್ಠಿ ಮೂಲಕ ಆಗ್ರಹಿಸಿದ್ದಾರೆ.

ನಗರಸಭೆ ವ್ಯಾಪ್ತಿಯಲ್ಲಿ 2012 ರಿಂದ ಒಟ್ಟು 35 ಬಹುಮಹಡಿ ಕಟ್ಟಡಗಳು ಕಾನೂನು ಬಾಹಿರವಾಗಿ ನಿರ್ಮಾಣಗೊಳ್ಳುತ್ತಿವೆ. ಈ ಬಗ್ಗೆ ಅಧಿಕಾರಿಗಳಿಗೆ ಹಾಗೂ ಪೌರಾಯುಕ್ತರಿಗೆ ಮನವಿ ಮಾಡಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದೇವೆ. ಆದರೆ ಯಾರೊಬ್ಬರು ಈ ಕಟ್ಟಡಗಳ ಬಗ್ಗೆ ಕ್ರಮ ಕೈಗೊಳ್ಳಲು ಮುಂದಾಗುತ್ತಿಲ್ಲ ಎಂದು ದೂರಿದರು.

ಎಲ್ಲ ಕಾಮಗಾರಿಗಳಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಕಂಡು ಬರುತ್ತಿದ್ದು, ಅಧಿಕಾರಿಗಳು ಈ ಬಗ್ಗೆ ತಿಳಿದಿದ್ದರೂ ಸುಮ್ಮನೆ ಕುಳಿತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಕೂಡಲೇ ಜಿಲ್ಲಾಧಿಕಾರಿಗಳು ತನಿಖೆಗೆ ಆದೇಶ ನೀಡಬೇಕು. ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದು ಇದರ ವಿರುದ್ಧ ತನಿಖೆಗೆ ಆದೇಶಿಸಬೇಕು ಎಂದು ಒತ್ತಾಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News