ಉಡುಪಿ: ನೂತನ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರ ಸ್ವೀಕಾರ
ಉಡುಪಿ, ಜು.29: ಉಡುಪಿ ಜಿಲ್ಲೆಯ ಹದಿನೆಂಟನೆ ಜಿಲ್ಲಾಧಿಕಾರಿಯಾಗಿ ಟಿ.ವೆಂಕಟೇಶ್ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು.
18 ತಿಂಗಳು ಜಿಲ್ಲಾಧಿಕಾರಿಯಾಗಿದ್ದ ಡಾ.ಟಿ.ವಿಶಾಲ್ ಬೆಂಗಳೂರಿಗೆ ವರ್ಗಾವಣೆಗೊಂಡ ಬಳಿಕ ಪ್ರಭಾರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತಿದ್ದ ಉಡುಪಿ ಸಿಇಓ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು ವೆಂಕಟೇಶ್‌ಗೆ ಅಧಿಕಾರ ಹಸ್ತಾಂತರಿಸಿದರು. ಬಳಿಕ ಅವರು ಜಿಲ್ಲೆಯ ಸಮಸ್ಯೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಪ್ರಸಕ್ತ ಜಿಲ್ಲೆ ಎದುರಿಸುತ್ತಿರುವ ಮರಳುಗಾರಿಕೆ, ಡೀಮ್ಡ್‌ಫಾರೆಸ್ಟ್, ವಸತಿ ಯೋಜನೆಗಳು, ಕುಡಿಯುವ ನೀರು, ಮುಜರಾಯಿ ಇಲಾಖೆ, ವಿವಿಧ ಇಲಾಖೆಗಳ ಸಿಬ್ಬಂದಿ ಕೊರತೆ ಬಗ್ಗೆ ಪ್ರಿಯಾಂಕ ಮೇರಿ ಫ್ರಾನ್ಸಿಸ್, ನೂತನ ಜಿಲ್ಲಾಧಿಕಾರಿಗೆ ಮಾಹಿತಿಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಬ್ರಹ್ಮಾವರ ತಹಶೀಲ್ದಾರ್ ತಿಪ್ಪೇಸ್ವಾಮಿ, ಬೈಂದೂರು ತಹಶೀಲ್ದಾರ್ ಕಿರಣ್, ಉಡುಪಿ ತಹಶೀಲ್ದಾರ್ ಗುರುಪ್ರಸಾದ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಯೋಗೇಶ್ವರ್, ಯೋಜನಾ ನಿರ್ದೇಶಕ ಪ್ರಸನ್ನ, ನಿರ್ಮಿತಿ ಕೇಂದ್ರದ ಅರುಣ್‌ಕುಮಾರ್, ನಗರಾಭಿವೃದ್ಧಿ ಇಲಾಖೆಯ ಆಯುಕ್ತ ಜನಾರ್ದನ್, ಸಹಾಯಕ ನಿರ್ದೇಶಕ ನಾಗರಾಜ್ ರಾವ್ ಉಪಸ್ಥಿತರಿದ್ದರು.