ನಿಧನ
Update: 2016-07-29 23:54 IST
ಸುಧಾಕರ ಆಚಾರ್ಯ
ಮೂಡುಬಿದಿರೆ, ಜು.29: ಬೆಳುವಾಯಿ ವಿಶ್ವಕರ್ಮ ಸಮಾಜ ಸೇವಾ ಸಂಘದ ಮಾಜಿ ಅಧ್ಯಕ್ಷ ಸುಧಾಕರ ಅಚಾರ್ಯ (66) ಶುಕ್ರವಾರ ಹೃದಯಾಘಾತದಿಂದ ನಿಧನರಾದರು. ‘ನವಭಾರತ’ ಪತ್ರಿಕೆಯಲ್ಲಿ ಪ್ರೂಫ್‌ರೀಡರ್ ಆಗಿದ್ದ ಅವರು ಬಳಿಕ‘ಉದಯವಾಣಿ’ ಪತ್ರಿಕೆಯ ಜಾಹೀರಾತು ಸಹಿತ ವಿವಿಧ ವಿಭಾಗಗಳಲ್ಲಿ ಸುಮಾರು 35 ವರ್ಷಗಳಿಗೂ ಅಧಿಕ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಶಾಸಕ ಕೆ. ಅಭಯಚಂದ್ರ ಜೈನ್, ಗುರುಮಠ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಸುಂದರ ಜಿ. ಆಚಾರ್ಯ, ಬೆಳುವಾಯಿ ಗ್ರಾಪಂ ಅಧ್ಯಕ್ಷ ಭಾಸ್ಕರ ಆಚಾರ್ಯ, ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಭಾಸ್ಕರ್ ಎಸ್. ಕೋಟ್ಯಾನ್ ಸಹಿತ ಅನೇಕ ಗಣ್ಯರು ಮೃತರ ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದರು.