ದ.ಕ. ಜಿಲ್ಲೆಯಲ್ಲಿ ರಸ್ತೆಗಿಳಿಯದ ಕೆಎಸ್ಸಾರ್ಟಿಸಿ ಬಸ್‌ಗಳು: ಪ್ರಯಾಣಿಕರ ಪರದಾಟ

Update: 2016-07-30 05:54 GMT

ಮಂಗಳೂರು, ಜು.30: ಮಹಾದಾಯಿ ನ್ಯಾಯಾಧಿಕರಣದ ತೀರ್ಪಿನಿಂದ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಆದರೆ ದ.ಕ. ಜಿಲ್ಲೆಯಲ್ಲಿ ಬಂದ್ ಇಲ್ಲದಿದ್ದರೂ ಕೆಎಸ್ಸಾರ್ಟಿಸಿಯು ಬಂದ್‌ಗೆ ಬೆಂಬಲ ಸೂಚಿಸಿ ಸಂಚಾರ ಸ್ಥಗಿತಗೊಳಿಸಿದೆ.

ಶುಕ್ರವಾರ ಮಧ್ಯರಾತ್ರಿಯಿಂದಲೇ ದ.ಕ. ಜಿಲ್ಲೆಯಲ್ಲಿ ಕೆಎಸ್ಸಾರ್ಟಿಸಿ ಬಸ್‌ಗಳ ಸಂಚಾರ ಸ್ಥಗಿತಗೊಂಡಿದೆ ಎನ್ನಲಾಗಿದೆ. ದ.ಕ. ಜಿಲ್ಲೆಯಲ್ಲಿ ಬಂದ್ ಇಲ್ಲ, ಶಾಲಾ ಕಾಲೇಜುಗಳು, ದೈನಂದಿನ ವ್ಯಾಪಾರ ವಹಿವಾಟುಗಳು ಎಂದಿನಂತೆ ನಡೆಯಲಿವೆ ಎಂದು ದ.ಕ. ಜಿಲ್ಲಾಧಿಕಾರಿ ಎ.ಬಿ. ಇಬ್ರಾಹೀಂ ಆದೇಶ ಹೊರಡಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಶಾಲಾ ಕಾಲೇಜುಗಳಿಗೆ ದಿನಿತ್ಯದಂತೆ ಆಗಮಿಸಿದ್ದ ವಿದ್ಯಾರ್ಥಿಗಳು ಕೆಎಸ್ಸಾರ್ಟಿಸಿ ಬಸ್‌ಗಳು ಇಲ್ಲದೆ ಪರದಾಡುವಂತಾಯಿತು.

ಕೆಎಸ್ಸಾರ್ಟಿಸಿ ಬಸ್‌ಗಳನ್ನು ನಂಬಿದ್ದ ಗ್ರಾಮಾಂತರ ಪ್ರದೇಶಗಳ ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳು ಮತ್ತೆ ಖಾಸಗಿ ವಾಹನಗಳನ್ನೇ ಅಲವಂಬಿಸಬೇಕಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News