ಮಹಾದಾಯಿ ನೀರು ಬೇಕು. ಅದು ನಮ್ಮ ಹಕ್ಕು : ಡಾ.ಶಿವರಾಜ್ ಕುಮಾರ್
ಬೆಂಗಳೂರು, ಜು.30: ಮಹಾದಾಯಿ ನೀರು ಬೇಕು. ಅದು ನಮ್ಮ ಹಕ್ಕು. ನಾವು ಶಕ್ತಿ ಪ್ರದರ್ಶನಕ್ಕಾಗಿ ಬಂದಿಲ್ಲ. ಜನರಿಗಾಗಿ ಬಂದಿದ್ದೇವೆ. ನಮ್ಮ ಹೋರಾಟ ಅರ್ಥಪೂರ್ಣವಾಗಿರಬೇಕು. ಮಹಾದಾಯಿಗಾಗಿ ದಿಲ್ಲಿಗೆ ಹೋಗಲು ಸಿದ್ದ ಎಂದು ಕನ್ನಡದ ಹಿರಿಯ ಚಿತ್ರ ನಟ ಡಾ.ಶಿವರಾಜ್ ಕುಮಾರ್ ಹೇಳಿದ್ದಾರೆ.ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ನಡೆದ ಮಹಾದಾಯಿ ನ್ಯಾಯಾಧೀಕರಣದ ಮಧ್ಯಂತರ ತೀರ್ಪಿನ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ವಿರೋಧಿಸಿ ನಡೆದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಮಹಾದಾಯಿ ವಿವಾದವನ್ನು ಬಗೆಹರಿಸಲು ಪ್ರಧಾನಿ ಮಧ್ಯಪ್ರವೇಶಿಸಬೇಕು. ಮೂರು ರಾಜ್ಮುಯಗಳ ಮುಖ್ಯ ಮಂತ್ರಿಗಳ ಸಭೆ ಕರೆಯಬೇಕು ಎಂದು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದ ಆಗ್ರಹಿಸಿದರು.
ಮಂಡ್ಯದಲ್ಲಿ ನಗರದ ಹೊಸಹಳ್ಳಿ ವೃತ್ತದಲ್ಲಿ ಅರೆಬೆತ್ತಲೆ ಮೆರವಣಿಗೆ, ಉರುಳು ಸೇವೆ ನಡೆಸಿದ ಕರವೇ ಕಾರ್ಯಕರ್ತರು ಟೈರ್ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ. ಅಂಗಡಿ ಮುಗ್ಗಟ್ಟುಗಳು ಮುಚ್ಚಿದ್ದು, ಬಸ್ಸುಗಳು ರಸ್ತೆಗೆ ಇಳಿದಿಲ್ಲ.
ತುಮಕೂರಿನಲ್ಲಿ ಟೈರಿಗೆ ಬೆಂಕಿ ಹಚ್ಚಿ ಪ್ರತಿಭಟನೆಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ರೈತ ಮುಖಂಡರು ಹಾಗೂ ಕನ್ನಡಪರ ಸಂಘಟನೆಗಳು ಮಾರುಕಟ್ಟೆ ಪ್ರತಿಭಟನಾ ರ‍್ಯಾಲಿ ನಡೆಸುತ್ತಿದ್ದಾರೆ. . ನವಲಗುಂದ ತಾಲೂಕಿನಲ್ಲಿ ಶಾಸಕ ಕೋನರೆಡ್ಡಿ ನೇತೃತ್ವದಲ್ಲಿ ವಿವೇಕಾನಂದ ವೃತ್ತದಲ್ಲಿ ಅಣುಕು ಶವಯಾತ್ರೆ ನಡೆಸಿ ಪ್ರತಿಭಟಿಸಿದರು.
ಬೆಳಗಾವಿ ಜಿಲ್ಲೆಯಾದ್ಯಂತ ಬಂದ್‌ಗೆ ಉತ್ತಮ ಬೆಂಬಲ ವ್ಯಕ್ತಪಡಿಸಿರುವ ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಅಂಗಡಿ ಮುಚ್ಚಿ ಬಂದ್‌ಗೆ ಸಾಥ್ ನೀಡಿದ್ದಾರೆ
ಗದಗದಲ್ಲಿ ಜಿಲ್ಲೆಯಲ್ಲಿ ರೈತರು ಮತ್ತು ಕನ್ನಡಪರ ಸಂಘಟನೆಗಳು ಶಾಂತಿಯುತ ಪ್ರತಿಭಟನೆ ನಡೆಸಿವೆ.
ಕೊಪ್ಪಳದಲ್ಲಿ ಹೋರಾಟಗಾರರು ಧ್ಯಾನಕ್ಕೆ ಕುಳಿತ ಮೋದಿ ಹಾಗೂ ನಿದ್ದೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಣುಕು ಪ್ರದರ್ಶನ ಮಾಡಿದರು.
ಮೈಸೂರಿನಲ್ಲಿ ಶಾಲೆ ಬಹಿಷ್ಕರಿಸಿ ಹೋರಾಟಕ್ಕೆ ನೇರ ಬೆಂಬಲ ಸೂಚಿಸಿರುವ ವಿಧ್ಯಾರ್ಥಿಗಳು ಕನ್ನಡಪರ ಸಂಘಟನೆಗಳು ಘೋಷಣೆ ಕೂಗುತ್ತಾ ಪ್ರತಭಟನೆ ನಡೆಸಿದೆ..
ದಾವಣಗೆರೆಯಲ್ಲಿ ಗೋವಾ ಸಿ ಎಂ ಪರ್ಸೆಕರ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಅಣಕು ಶವಯಾತ್ರೆ ನಡೆಸಿದ್ದಾರೆ.
ಕಾರವಾರದಲ್ಲಿ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜಯ ಕರ್ನಾಟಕ ಸಂಘಟನೆಯಿಂದ ಪ್ರತಿಭಟನಾ ಮೆರವಣಿಗೆ ನಡೆದಿದೆ.