ಬಿಜೆಪಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ಡಾ. ವೈ. ಭರತ್ ಶೆಟ್ಟಿ ನೇಮಕ
Update: 2016-07-30 18:10 IST
ಮಂಗಳೂರು, ಜು.30: ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ಡಾ. ವೈ.ಭರತ್ ಶೆಟ್ಟಿ ಆಯ್ಕೆಯಾಗಿದ್ದಾರೆ.
ಡಾ. ವೈ. ಭರತ್ ಶೆಟ್ಟಿ ಪ್ರಸ್ತುತ ಡೆಂಟಲ್ ಕೌನ್ಸಿಲ್ ಆಫ್ ಇಂಡಿಯಾದ ಸದಸ್ಯರಾಗಿದ್ದು, ಈ ಹಿಂದೆ ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾಗಿ, ಬಿಜೆಪಿ ಯುವ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಅವರ ಆದೇಶದಂತೆ ಆಯ್ಕೆ ಪ್ರಕ್ರಿಯೆ ನಡೆದಿದೆ ಎಂದು ಪ್ರಕಟನೆ ತಿಳಿಸಿದೆ.