ಆ.2: ವಿವಿಧ ಯೋಜನಾ ಕಾಮಗಾರಿಗಳಿಗೆ ಶಿಲಾನ್ಯಾಸ
ಮಂಗಳೂರು, ಜು.30: ಆಗಸ್ಟ್ 2 ರಂದು ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಅನುಷ್ಠಾನ ಗೊಳ್ಳುತ್ತಿರುವ ವಿವಿಧ ಕಾಲುಸಂಕ ಕಾಮಗಾರಿಗಳ ಶಿಲಾನ್ಯಾಸ ಸಮಾರಂಭ ನಡೆಯಲಿದೆ. ಪುತ್ತೂರು ಶಾಸಕಿ ಶಕುಂತಳಾ ಟಿ. ಶೆಟ್ಟಿ ಶಿಲಾನ್ಯಾಸವನ್ನು ನೆರವೇರಿಸಲಿದ್ದು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಿವೇದಿತ್ ಆಳ್ವ ಉಪಸ್ಥಿತರಿರುವರು.
ಆಗಸ್ಟ್ 2ರಂದು ಪೂರ್ವಾಹ್ನ 11 ಗಂಟೆಗೆ ಬನ್ನೂರು ಗ್ರಾಪಂ ವ್ಯಾಪ್ತಿಯ ಪಡ್ನೂರು ಗ್ರಾಮದ ಕುಂಬಾಡಿಯಲ್ಲಿ, ಅಪರಾಹ್ನ 12 ಗಂಟೆಗೆ ಬೆಟ್ಟಂಪಾಡಿ ಗ್ರಾಪಂ ವ್ಯಾಪ್ತಿಯ ಬೆಟ್ಟಂಪಾಡಿ ಗ್ರಾಮದ ತಲಪಾಡಿ ಕೊರಂಗಿಲಯಲ್ಲಿ ಅಪರಾಹ್ನ 1 ಗಂಟೆಗೆ ಕೆದಂಬಾಡಿ ಗ್ರಾಪಂ ವ್ಯಾಪ್ತಿಯ ಕೆದಂಬಾಡಿ ಗ್ರಾಮದ ಕಡೆಮಜಲು ಕೆರೆಮೂಲೆ ಪಾಣಿಮಾರುಯಲ್ಲಿ, ಮಧ್ಯಾಹ್ನ 1:30ಕ್ಕೆ ಕೆಯ್ಯೂರು ಗ್ರಾಪಂ ವ್ಯಾಪ್ತಿಯ ಕೆಯ್ಯೂರು ಗ್ರಾಮದ ಬೈಲಮೂಲೆ ಎಂಬಲ್ಲಿ ಕಾಲುಸಂಕ ನಿರ್ಮಾಣ ಕಾಮಗಾರಿಯ ಶಿಲಾನ್ಯಾಸ ಕಾರ್ಯಕ್ರಮಗಳನ್ನು ನೆರವೇರಿಸಲಿದ್ದಾರೆ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಪ್ರಕಟನೆ ತಿಳಿಸಿದೆ.