ಬ್ಯಾರೀಸ್ ಕಲ್ಚರಲ್ ಫೋರಮ್ ದುಬೈ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಶಸ್ತಿ
ಮಂಗಳೂರು,ಆ.1: ಬ್ಯಾರೀಸ್ ಕಲ್ಚರಲ್ ಫೋರಮ್ ದುಬೈ ವತಿಯಿಂದ ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ ಎಲ್ಲಾ ಸಮುದಾಯಗಳ ವಿದ್ಯಾರ್ಥಿಗಳಿಗೆ ಮತ್ತು ದ್ವಿತೀಯ ಪಿಯುಸಿಯಲ್ಲಿ ಅತ್ಯಧಿಕ ಅಂಕ ಪಡೆದ ಬ್ಯಾರಿ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ ಅಭಿನಂದಿಸಲಾಗುವುದು.ಎಸ್‌ಎಸ್‌ಎಲ್‌ಸಿಯಲ್ಲಿ ಗರಿಷ್ಠ ಅಂಕ ಪಡೆದ ಮೂವರಿಗೆ ಹಾಗೂ ಪಿಯುಸಿ ಪ್ರತೀ ವಿಭಾಗದಲ್ಲಿ ಇಬ್ಬರಂತೆ ಆರು ಮಂದಿಗೆ ನಗದು ಪುರಸ್ಕಾರದೊಂದಿಗೆ ಪ್ರಶಸ್ತಿಯನ್ನು ನೀಡಲಾಗುವುದು.ಕನಿಷ್ಠ 92% ಅಂಕ ಪಡೆದ ವಿದ್ಯಾರ್ಥಿಗಳು ಪ್ರಶಸ್ತಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.ಅರ್ಜಿಯೊಂದಿಗೆ ದೃಢೀಕೃತ ಅಂಕಪಟ್ಟಿಯನ್ನು ಲಗತ್ತಿಸಿ ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್, ವಿಶ್ವಾಸ್‌ಕ್ರೌನ್, ಕಂಕನಾಡಿ ಮಂಗಳೂರು-08.08.2016 ರೊಳಗೆ ಸಲ್ಲಿಸಬಹುದು.ಪ್ರಶಸ್ತಿಗೆ ಬಂದ ಅರ್ಜಿಗಳಲ್ಲಿ ಮಾತ್ರ ಅತ್ಯಧಿಕ ಅಂಕ ಪಡೆದವರನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದು. ಸದರಿ ಪ್ರಶಸ್ತಿಗೆ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವಂತೆ ಬ್ಯಾರೀಸ್ ಕಲ್ಚರಲ್ ಫೋರಮ್ ದುಬೈ ಇದರ ಉಪಾಧ್ಯಕ್ಷ ಮತ್ತು ವಿದ್ಯಾರ್ಥಿವೇತನ ಸಮಿತಿಯ ಅಧ್ಯಕ್ಷ ಎಂ.ಇ ಮೂಳೂರು ಪತ್ರಿಕಾ ಪ್ರಕಟನೆಯಲ್ಲಿ ವಿನಂತಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ-0824-4267883