×
Ad

ಇಸ್ಲಾಮಿಯಾ ಆಂಗ್ಲೋ ಉರ್ದು ಪ್ರೌಢಶಾಲೆಗೆ ಬೆಸ್ಟ್ ಸ್ಕೂಲ್ ರೋಲಿಂಗ್ ಶೀಲ್ಡ್

Update: 2016-08-01 22:05 IST

ಭಟ್ಕಳ, ಆ.1: ಕಳೆದ ಮೂರು ವರ್ಷಗಳಿಂದ ಸತತವಾಗಿ ರಾಬಿತಾ ಸೊಸೈಟಿಯಿಂದ ನೀಡಲ್ಪಡುವ ಉತ್ತಮ ಶಾಲೆ ರೋಲಿಂಗ್‌ಶೀಲ್ಡ್‌ನ್ನು ಅಂಜುಮನ್ ಹಾಮಿಯೆ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯ ಇಸ್ಲಾಮಿಯಾ ಆಂಗ್ಲೋ ಉರ್ದು ಪ್ರೌಢಶಾಲೆ ಪಡೆದುಕೊಂಡಿದೆ. ಸತತವಾಗಿ ಕಳೆದ ಮೂರು ವರ್ಷಗಳಿಂದ ಇದೇ ಶಾಲೆಯು ಉತ್ತಮ ಶಾಲೆ ಎಂಬ ಕೀರ್ತಿಗೆ ಪಾತ್ರರಾಗುತ್ತಿದ್ದು ಸರ್ವಾಂಗೀಣ ಅಭಿವೃದ್ಧಿಯನ್ನು ಗುರುತಿಸುತ್ತಿದೆ ಎಂದು ಮುಖ್ಯೋಪಾಧ್ಯಾಯ ಶಬ್ಬಿರ್ ಅಹ್ಮದ್ ದಫೆದಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ನಮ್ಮ ಶಾಲೆಯು ಶೈಕ್ಷಣಿಕವಾಗಿ ಉತ್ತಮ ಪ್ರಗತಿಯನ್ನು ಹೊಂದುತ್ತಿದ್ದು ಕ್ರೀಡಾ ಕ್ಷೇತ್ರದಲ್ಲಿ ಅಗಾಧ ಸಾಧನೆ ಮಾಡಿದೆ. ಪ್ರತೀ ವರ್ಷ ಇಲ್ಲಿನ ವಿದ್ಯಾರ್ಥಿಗಳು ರಾಜ್ಯ ಹಾಗೂ ರಾಷ್ಟ್ರಮಟ್ಟವನ್ನು ಪ್ರತಿನಿಧಿಸುತ್ತಿದ್ದಾರೆ. ಇಲ್ಲಿನ ವಿದ್ಯಾರ್ಥಿಗಳು ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಇಲ್ಲಿನ ಶಿಕ್ಷಕರ ಸಹಕಾರ ಹಾಗೂ ವಿದ್ಯಾರ್ಥಿಗಳ ಆಸಕ್ತಿಯಿಂದಲೇ ಇದು ಸಾಧ್ಯವಾಗಿದೆ ಎಂದು ಅವರು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News