ಕೆರೆಗೆ ಬಿದ್ದು ಮಹಿಳೆ ಮೃತ್ಯು
Update: 2016-08-01 23:47 IST
ಕುಂದಾಪುರ, ಆ.1: ಕರ್ಕುಂಜೆ ಗ್ರಾಮದ ಗುಡ್ರಿ ಹೊಕ್ಕೋಳಿ ಎಂಬಲ್ಲಿ ಮಹಿಳೆಯೊಬ್ಬರು ಕೆರೆಗೆ ಬಿದ್ದು ಮೃತಪಟ್ಟ ಘಟನೆ ರವಿವಾರ ಬೆಳಗ್ಗೆ ನಡೆದಿದೆ.
ಮೃತರನ್ನು ಹೊಕ್ಕೋಳಿಯ ಸುಜಾತಾ (38) ಎಂದು ಗುರುತಿಸಲಾಗಿದೆ. ಇವರು ಮನೆ ಸಮೀಪ ಕಟ್ಟಿಗೆ ತರಲು ಹೋದಾಗ ಅಲ್ಲೇ ಇದ್ದ ಕೆರೆಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.