×
Ad

ಉಪ್ಪಿನಂಗಡಿ: ನೇಣುಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

Update: 2016-08-02 18:55 IST

ಉಪ್ಪಿನಂಗಡಿ, ಆ.2: ಉಪ್ಪಿನಂಗಡಿ ಸರಕಾರಿ ಪ.ಪೂ.ಕಾಲೇಜಿನ ವಿದ್ಯಾರ್ಥಿನಿ ತನ್ನ ಅಜ್ಜಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ನಡೆದಿದೆ.

ಮೂಲತಃ ಸೋಮವಾರ ಪೇಟೆಯ ನಿವಾಸಿ ವಸಂತ ಎಂಬವರ ಪುತ್ರಿ ಶಬ್ದಾ (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ಇವರು ನೆಲ್ಯಾಡಿಯ ಹೊಸಮಜಲು ಎಂಬಲ್ಲಿನ ತನ್ನ ಅಜ್ಜಿ ಮನೆಯಿಂದ ಕಾಲೇಜಿಗೆ ಹೋಗುತ್ತಿದ್ದು, ಅಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿದ್ಯಾರ್ಥಿನಿಯು ಹೊಂದಿದ್ದ ಮೊಬೈಲ್‌ನ್ನು ಪರಿಶೀಲನೆಗೆ ಒಳಪಡಿಸಲಾಗಿದ್ದು, ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News