×
Ad

ಭಟ್ಕಳ: ಜನತಾ ವಿದ್ಯಾಲಯದಲ್ಲಿ ಆರೋಗ್ಯ ಉಪನ್ಯಾಸ

Update: 2016-08-02 23:33 IST

ಭಟ್ಕಳ, ಆ.2: ಜನತಾ ವಿದ್ಯಾಲಯ ಮುರ್ಡೇಶ್ವರದಲ್ಲಿ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾಗಿದ್ದ ಆರೋಗ್ಯ ಮಾಹಿತಿ ಉಪನ್ಯಾಸ ಕಾರ್ಯಕ್ರಮವನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಎಸ್.ಎಸ್.ಕಾಮತ್ ಉದ್ಘಾಟಿಸಿದರು.

ಉಪನ್ಯಾಸವನ್ನು ನೀಡಿದ ತಾಲೂಕಾ ಆರೋಗ್ಯಾಧಿಕಾರಿ ಡಾ.ಮೂರ್ತಿರಾಜ ಭಟ್, ವೈಯಕ್ತಿಕ ಆರೋಗ್ಯ ಮತ್ತು ಸಾಂಕ್ರಾಮಿಕ ರೋಗಗಳ ಹರಡುವಿಕೆಗೆ ಕಾರಣವಾದ ವೈರಾಣುಗಳು ಮತ್ತು ರೋಗದ ಲಕ್ಷಣಗಳು, ಹಾಗೂ ವೈಯಕ್ತಿಕ ಸ್ವಚ್ಛತೆಯ ಕುರಿತು ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶಾಲಾ ಮುಖ್ಯೋಪಾಧ್ಯಾಯ ಉಳ್ಳಿಕಾಶಿ ಮಾತನಾಡಿ, ರೋಗಗಳು ಬಂದ ಮೇಲೆ ಚಿಕಿತ್ಸೆ ಪಡೆಯುವುದಕ್ಕಿಂತ ರೋಗ ಬರುವ ಮೊದಲು ಜಾಗೃತರಾಗಿ ರೋಗ ಬರದಂತೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಹಿರಿಯ ಶಿಕ್ಷಕ ಶೇಷಗಿರಿ ಎಂ.ಗೋವಾಳಿ, ಮಹೇಶ ಜಿ.ನಾಯ್ಕ, ಹಿರಿಯ ಆರೋಗ್ಯ ಸಹಾಯಕ ಈರಯ್ಯ ದೇವಾಡಿಗ ಮುಂತಾದವರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ದೈಹಿಕ ಶಿಕ್ಷಕ ಪ್ರಹ್ಲಾದ ನಾಯ್ಕ ನಿರೂಪಿಸಿದರು.ಅಭಿಷೇಕ ನಾಯ್ಕ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News