ಕೊನೆಗೂ ಪೊಲೀಸರಿಗೆ ಶರಣಾದ ಮರಿಗೌಡ
Update: 2016-08-03 14:52 IST
ಬೆಂಗಳೂರು, ಆ.3: ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಮುಖಂಡ ಕೆ.ಮರೀಗೌಡ ಪೊಲೀಸರ ಮುಂದೆ ಶರಣಾಗಿದ್ದಾರೆ.
ಹೈಕೋರ್ಟ್‌ಗೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಅವರು ಮಂಗಳವಾರ ವಾಪಸ್ ಪಡೆದಿದ್ದರು. ಬುಧವಾರ ಮಧ್ಯಾಹ್ನ ತಮ್ಮ ವಕೀಲರ ಜೊತೆ ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಗೆ ಆಗಮಿಸಿದ ಕೆ.ಮರೀಗೌಡ ಪೊಲೀಸರ ಮುಂದೆ ಶರಣಾಗಿದ್ದಾರೆ.
ಪೊಲೀಸರು ಅವರನ್ನು ಬಂಧಿಸಿ ಕೋರ್ಟ್‌ಗೆ ಹಾಜರುಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.