ಹಲ್ಲೆ: ನಾಲ್ವರ ಬಂಧನ
Update: 2016-08-03 23:49 IST
ಬೆಳ್ತಂಗಡಿ, ಆ.3: ಧರ್ಮಸ್ಥಳ ಪೇಟೆಯಲ್ಲಿ ಮಂಗಳವಾರ ಸಂಜೆಯ ವೇಳೆ ಚಂದ್ರಕಾಂತ ಎಂಬವರಿಗೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಧರ್ಮಸ್ಥಳ ನಿವಾಸಿಗಳಾದ ಸಂದೇಶ್, ಸತೀಶ್, ಶರಣ್, ಹಾಗೂ ಯೋಗೀಶ್ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ನ್ಯಾಯಾಲಯವು 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸತೀಶ್ ಎಂಬಾತ ಪ್ರತಿದೂರು ನೀಡಿದ್ದು ತನ್ನ ಮೇಲೆ ಚಂದ್ರಕಾಂತ ಹಾಗೂ ಇತರರು ಹಲ್ಲೆ ನಡೆಸಿರುವುದಾಗಿ ಹೇಳಿದ್ದಾರೆ. ಪೋಲೀಸರು ದೂರು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.