×
Ad

ಆ.5ರಂದು ಪೊಲೀಸ್ ನೇರ ಫೋನ್ ಇನ್ ಕಾರ್ಯಕ್ರಮ

Update: 2016-08-04 17:30 IST

ಮಂಗಳೂರು,ಆ.4: ಸಾರ್ವಜನಿಕ ಸಮಸ್ಯೆಗಳಿಗೆ ಸಂಬಂಧಿಸಿ ಜನಸಾಮಾನ್ಯರಿಂದ ನೇರವಾಗಿ ದೂರು, ಸಮಸ್ಯೆಗಳನ್ನು ತಿಳಿದುಕೊಳ್ಳುವ ಸಲುವಾಗಿ ಮಂಗಳೂರು ಪೊಲೀಸ್ ಆಯುಕ್ತಾಲಯದ ವತಿಯಿಂದ ಪೊಲೀಸ್ ನೇರ ಫೋನ್ ಇನ್ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಚಂದ್ರಶೇಖರ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿಂದು ಈ ವಿಷಯ ತಿಳಿಸಿದ ಆ. 5ರಂದು ಬೆಳಗ್ಗೆ 10ರಿಂದ 11 ಗಂಟೆಯವರೆಗೆ ಈ ಕಾರ್ಯಕ್ರಮ ಆರಂಭಗೊಳ್ಳಲಿದೆ. ಬಳಿಕ ಪ್ರತಿ ಶುಕ್ರವಾರ ಈ ಕಾರ್ಯಕ್ರಮ ಮುಂದುವರಿಯಲಿದ್ದು, ಖುದ್ದು ತಾನು ಅಥವಾ ಡಿಸಿಪಿ (ಕಾನುನು ಮತ್ತು ಸುವ್ಯವಸ್ಥೆ) ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರ ದೂರು, ಸಮಸ್ಯೆಗಳನ್ನು ಆಲಿಸಲಿದ್ದಾರೆ ಎಂದವರು ಹೇಳಿದರು.

ದೂ.ಸಂ. 0824-2220801, 2220830 ಗೆ ಕರೆ ಮಾಡಿ ಸಾರ್ವಜನಿಕ ಸಮಸ್ಯೆಗಳನ್ನು ತಿಳಿಸಬಹುದಾಗಿದೆ. ಠಾಣೆಗಳಿಗೆ ಎಲ್ಲರಿಗೂ ಬರುವುದು ಸಾಧ್ಯವಾಗುವುದಿಲ್ಲ. ಅದಕ್ಕಾಗಿ ಇಂತಹ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಕೆಲವೊಂದು ಮೂಲಭೂತ ಸಮಸ್ಯೆಗಳನ್ನು ಅರಿಯುವಲ್ಲಿ ಪೊಲೀಸ್ ಇಲಾಖೆಗೆ ಇದು ನೆರವಾಗುವ ನಿರೀಕ್ಷೆ ಇದೆ. ಇತ್ತೀಚೆಗೆ ಪತ್ರಿಕಾ ಕಚೇರಿಯೊಂದರಲ್ಲಿ ನಡೆದ ಫೋನ್ ಇನ್ ಕಾರ್ಯಕ್ರಮ ವೇಳೆ ಶಕ್ತಿನಗರದಲ್ಲಿನ ಡ್ರಗ್ಸ್ ಹಾವಳಿಯ ಮಾಹಿತಿ ಸಾರ್ವಜನಿಕರೊಬ್ಬರಿಂದ ವ್ಯಕ್ತವಾಯಿತು. ಅದರ ಬಗ್ಗೆ ನನಗೆ ಮಾಹಿತಿ ಇರಲಿಲ್ಲ ಎಂದು ಅವರು ಈ ಸಂದರ್ಭ ಅಭಿಪ್ರಾಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News