ಪುತ್ತೂರು: ಹೆಜ್ಜೇನು ದಾಳಿಯಿಂದ ವ್ಯಕ್ತಿ ಅಸ್ವಸ್ಥ
Update: 2016-08-04 19:09 IST
ಪುತ್ತೂರು, ಆ.4: ಹೆಜ್ಜೇನು ದಾಳಿಯಿಂದ ವ್ಯಕ್ತಿಯೊಬ್ಬರು ತೀರಾ ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ ಘಟನೆ ಪುತ್ತೂರು ತಾಲೂಕಿನ ನಿಡ್ಪಳ್ಳಿ ಗ್ರಾಮದ ಮುಂಡೆಕೊಚ್ಚಿ ಎಂಬಲ್ಲಿ ಬುಧವಾರ ಸಂಭವಿಸಿದೆ.
ನಿಡ್ಪಳ್ಳಿ ಗ್ರಾಮದ ಮುಂಡೆಕೊಚ್ಚಿ ನಿವಾಸಿ ಈಶ್ವರ ನಾಯ್ಕ (51) ಹೆಜ್ಜೇನು ಕಡಿತಕ್ಕೊಳಗಾಗಿ ತೀವ್ರ ಸ್ವರೂಪದ ಗಾಯಗೊಂಡವರು.
ಈಶ್ವರ ನಾಯ್ಕ ಬುಧವಾರ ತನ್ನ ಮನೆ ಸಮೀಪವಿರುವ ಜಮೀನಿನಲ್ಲಿ ಗಿಡಗಂಟಿಗಳನ್ನು ತೆರವುಗೊಳಿಸುವ ಕೆಲಸ ಮಾಡುತ್ತಿದ್ದ ವೇಳೆ ದಿಢೀರ್ ಆಗಿ ಹೆಜ್ಜೇನುಗಳು ದಾಳಿ ನಡೆಸಿರುವುದಾಗಿ ತಿಳಿದು ಬಂದಿದೆ. ತೀವ್ರವಾಗಿ ಅಸ್ವಸ್ಥಗೊಂಡ ಅವರನ್ನು ಕೂಡಲೇ ಪುತ್ತೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.