×
Ad

ಕಾಸರಗೋಡು: 6.5 ಕೆ.ಜಿ. ಗಾಂಜಾ ಸಹಿತ ಇಬ್ಬರ ಸೆರೆ

Update: 2016-08-04 21:45 IST

ಕಾಸರಗೋಡು, ಆ.4: ಆಟೋರಿಕ್ಷಾದಲ್ಲಿ ಸಾಗಾಟ ಮಾಡುತ್ತಿದ್ದ ಆರೂವರೆ ಕಿಲೋ ಗಾಂಜಾ ಸಹಿತ ಇಬ್ಬರನ್ನು ಬೇಕಲ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ತಮಿಳುನಾಡಿನ ದೊರೈ ಪಾಂಡ್ಯಾ (26) ಮತ್ತು ತಂಜಾವೂರಿನ ಕರುಪ್ಪಯ್ಯನ್ ಮಣಿ (41) ಎಂದು ಗುರುತಿಸಲಾಗಿದೆ.

ಪೊಲೀಸರಿಗೆ ಲಭಿಸಿದ ಮಾಹಿತಿಯಂತೆ ಗುರುವಾರ ಸಂಜೆ ವಾಹನ ತಪಾಸಣೆ ನಡೆಸುತ್ತಿದ್ದಾಗ ಈ ದಾರಿಯಾಗಿ ಬಂದ ಆಟೋ ರಿಕ್ಷಾವನ್ನು ತಡೆದು ತಪಾಸಣೆ ನಡೆಸುತ್ತಿದ್ದಾಗ ಗಾಂಜಾ ಪತ್ತೆಯಾಗಿದೆ. ಆರೋಪಿಗಳು ಹಲವು ವರ್ಷಗಳಿಂದ ಬೇಕಲದಲ್ಲಿ ವಾಸಿಸುತ್ತಿದ್ದಾರೆ ಎನ್ನಲಾಗಿದೆ.

ತಮಿಳುನಾಡಿನಿಂದ ಗಾಂಜಾ ವನ್ನು ಕಾಸರಗೋಡಿಗೆ ತಲಪಿಸಿ ಹಲವಡೆ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News