×
Ad

ಪಾರ್ಲರ್‌ನಲ್ಲಿ ವೇಶ್ಯಾವಾಟಿಕೆ: ಮೂವರ ಬಂಧನ

Update: 2016-08-04 22:58 IST

ಮಂಗಳೂರು, ಆ. 4: ನಗರದ ಕೆ.ಎಸ್.ರಾವ್ ರಸ್ತೆಯಲ್ಲಿ ಮಸಾಜ್ ಪಾರ್ಲರ್‌ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಮೂವರನ್ನು ಬಂದರು ಠಾಣಾ ಪೊಲೀಸರು ಬಂಧಿಸಿ, ಐವರು ಯುವತಿಯರನ್ನು ರಕ್ಷಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಉಪ್ಪಿನಂಗಡಿಯ ಅಶ್ರಫ್, ಕೇರಳದ ಸುರೇಶ ಹಾಗೂ ಬಂಟ್ವಾಳದ ಕೇಶವ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ 6,100 ರೂ. ಹಾಗೂ ಕೆಲವು ಪತ್ರಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೆ.ಎಸ್.ರಾವ್ ರಸ್ತೆಯಲ್ಲಿರುವ ಕಟ್ಟಡವೊಂದರ ಮಹಡಿಯಲ್ಲಿನ ಆಯುರ್ವೇದಿಕ್ ಥೆರಪಿ ಕ್ಲಿನಿಕ್ ಮಸಾಜ್ ಸೆಂಟರ್‌ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿತ್ತು ಎಂದು ಹೇಳಲಾಗಿದ್ದು, ಈ ಬಗ್ಗೆ ಲಭಿಸಿದ ಖಚಿತ ಮಾಹಿತಿ ಮೇರೆಗೆ ಬಂದರು ಇನ್‌ಸ್ಪೆಕ್ಟರ್ ಶಾಂತಾರಾಮ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದರು.

ಎಎಸ್ಸೈ ದಯಾನಂದ ಹಾಗೂ ಸಿಬ್ಬಂದಿಯಾದ ಸುಜನ್, ಡಿಸೋಜ, ಗೋವರ್ಧನ್, ಗಣೇಶ್ ಕಾಮತ್, ರೇಶ್ಮಾ, ಯೋಗಿತಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News