×
Ad

ಸಹಕಾರಿ ಪಿತಾಮಹ ಮೊಳಹಳ್ಳಿಶಿವರಾವ್‌ರ 136ನೆ ಜನ್ಮದಿನಾಚರಣೆ

Update: 2016-08-04 23:58 IST

ಮಂಗಳೂರು, ಆ.4: ದಿ.ಮೊಳಹಳ್ಳಿ ಶಿವರಾವ್‌ರವರು ಸಹಕಾರ ಕ್ಷೇತ್ರಕ್ಕೆ ಭದ್ರವಾದ ನೆಲೆಯನ್ನು ಕಲ್ಪಿಸಿದ ಪ್ರೇರಕ ಶಕ್ತಿ. ಇಂದು ಸಹಕಾರ ಕ್ಷೇತ್ರ ಅದರ ಸಂಸ್ಮರಣೆ ಮಾಡುತ್ತಿರುವುದು ಅವರ ಆದರ್ಶ ವ್ಯಕ್ತಿತ್ವಕ್ಕಾಗಿ, ಸಹಕಾರವೆಂಬ ನಂದಾದೀಪವನ್ನು ಬೆಳಗಿಸಿ ಶಿವರಾಯರು ತಮ್ಮ ಜೀವಿತ ಕಾಲದ 87ವರ್ಷಗಳಲ್ಲಿ 58ವರ್ಷಗಳನ್ನು ಸಹಕಾರ ಕ್ಷೇತ್ರಕ್ಕಾಗಿ ಮೀಸಲಿರಿಸಿದ ಅವರು ಸಹಕಾರ ಕ್ಷೇತ್ರದ ಪಿತಾಮಹರಾಗಿ ಸಹಕಾರಿಗಳೆಲ್ಲರಿಗೂ ಸ್ಮರಣೀಯರಾಗಿದ್ದಾರೆ ಎಂದು ಎಸ್‌ಸಿಡಿಸಿಸಿ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದ್ದಾರೆ.
 
ಎಸ್‌ಸಿಡಿಸಿಸಿ ಬ್ಯಾಂಕ್‌ನಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ದ.ಕ. ಜಿಲ್ಲಾ ಸಹಕಾರಿ ಬ್ಯಾಂಕ್ ಹಾಗೂ ದ.ಕ. ಜಿಲ್ಲಾ ಸಹಕಾರಿ ಯೂನಿಯನ್, ಮಂಗಳೂರು ಇದರ ಸಂಯುಕ್ತಾಶ್ರಯದಲ್ಲಿ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾವ್‌ರವರ 136ನೆ ಜನ್ಮ ದಿನಾಚರಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಂಗಳೂರು ವಿವಿ ಕುಲ ಸಚಿವ ಪ್ರೊ.ಕೆ.ಎಂ.ಲೋಕೇಶ್ ಸಮಾರಂಭವನ್ನು ಉದ್ಘಾಟಿಸಿದರು.ರ್ನಾಟಕ ರಾಜ್ಯ ಸಹಕಾರ ಅಡಿಕೆ ಮಾರಾಟ ಮಹಾ ಮಂಡಳದ ಅಧ್ಯಕ್ಷ ಕೊಂಕೋಡಿ ಪದ್ಮನಾಭ, ಕ್ಯಾಂಪ್ಕೊ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ, ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ ಮೊಳಹಳ್ಳಿ ಸಂಸ್ಮರಣೆಗೈದರು. ರ್ನಾಟಕ ರಾಜ್ಯ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿರ್ದೇಶಕ ಸುದರ್ಶನ್ ಜೈನ್, ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ, ಮಂಗಳೂರಿನ ಹಾಪ್‌ಕಾಮ್ಸ್‌ನ ಅಧ್ಯಕ್ಷ ಲಕ್ಷ್ಮೀನಾರಾಯಣ ಉಡುಪ, ಎಸ್‌ಸಿಡಿಸಿಸಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಶ್ವನಾಥ ನಾಯರ್, ದ.ಕ. ಜಿಲ್ಲಾ ಮಹಿಳಾ ಸಹಕಾರಿ ಬ್ಯಾಂಕ್‌ನ ಸಿಇಒ ಪ್ರತಿಭಾ ಶೆಟ್ಟಿ ಉಪಸ್ಥಿತರಿದ್ದರು.
 ದ.ಕ. ಜಿಲ್ಲಾ ಸಹಕಾರಿ ಒಕ್ಕೂಟದ ಅಧ್ಯಕ್ಷ ಹರೀಶ್ ಆಚಾರ್ಯ ಸ್ವಾಗತಿಸಿದರು. ಬ್ಯಾಂಕ್‌ನ ಮಾಜಿ ವ್ಯವಸ್ಥಾಪನಾ ನಿರ್ದೇಶಕ ಲಕ್ಷ್ಮಣ್ ಕುಮಾರ್ ಮಲ್ಲೂರು ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News