×
Ad

ಬ್ಯಾರೀಸ್ ಕಾಲೇಜಿನಲ್ಲಿ ಮಾಹಿತಿ ತಂತ್ರಜ್ಞಾನ ಸಂಘ ಉದ್ಘಾಟನೆ

Update: 2016-08-05 14:55 IST

ಕುಂದಾಪುರ, ಆ.5: ಕೋಡಿ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಭಾಗದ ವತಿಯಿಂದ ಆರಂಭಿಸಿದ ಮಾಹಿತಿ ತಂತ್ರಜ್ಞಾನ ಸಂಘದ ಉದ್ಘಾಟನೆ ಇತ್ತೀಚೆಗೆ ನೆರವೇರಿತು.
 ಸಂಸ್ಥೆಯ ಅಧ್ಯಕ್ಷ ಹಾಜಿ ಮಾಸ್ಟರ್ ಮೆಹಮೂದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಬ್ರಹ್ಮಾವರ ಎಸ್.ಎಂ.ಎಸ್. ಕಾಲೇಜಿನ ಪ್ರೊ.ಮಹೇಶ್, ಪರೀಕ್ಷೆಯಲ್ಲಿ ಪಡೆಯುವ ಅಂಕ ಮುಖ್ಯವಲ್ಲ, ಜೀವನದಲ್ಲಿ ಕೌಶಲ್ಯ ಪ್ರತಿಭೆೆ ಬೆಳಸಿಕೊಳ್ಳಬೇಕು. ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದರು. ಭಾಷಣ ಕಲೆ, ಬೌದ್ಧಿಕ, ಆಧ್ಯಾತ್ಮಿಕ ಸಮಯದ ವೌಲ್ಯ, ಆರೋಗ್ಯದ ಪ್ರಾಮುಖ್ಯತೆಯ ಕುರಿತು ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
 ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಪ್ರೊ.ಶಮೀರ್ ಹಾಗೂ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥೆ ನೂತನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
 ವಿದ್ಯಾರ್ಥಿನಿ ಅಂಬಿಕಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿ ಅಸೀಮಾ ಸ್ವಾಗತಿಸಿದರು. ವಿದ್ಯಾರ್ಥಿ ಜಾನ್ಸನ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News