×
Ad

ಆ.6ಕ್ಕೆ ಉಡುಪಿ, 13ರಂದು ದ.ಕ. ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಚುನಾವಣೆ

Update: 2016-08-05 15:48 IST

ಮಂಗಳೂರು, ಆ.5: ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ವಿದ್ಯಾರ್ಥಿ ಸಂಘದ ಚುನಾವಣೆ ಆ.6 ಮತ್ತು ಹಾಗೂ ದ.ಕ.ಜಿಲ್ಲೆಯ ವಿದ್ಯಾರ್ಥಿ ಸಂಘದ ಚುನಾವಣೆ ಆ. 13ಕ್ಕೆ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ದಿನಕರ ಶೆಟ್ಟಿ ಹೇಳಿದರು.
 ನಗರದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ ಜಿಲ್ಲೆಯ ಚುನಾವಣೆ ಆ.6ರಂದು ಪೂರ್ವಾಹ್ನ 11 ಗಂಟೆಗೆ ಕಾರ್ಕಳದ ಪ್ರಕಾಶ್ ಹೋಟೆಲ್ ಸಭಾಂಗಣದಲ್ಲಿ ನಡೆಯಲಿದೆ. ಆ.13ರಂದು ಪೂರ್ವಾಹ್ನ 11 ಗಂಟೆಗೆ ಮಂಗಳೂರಿನ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ಕಾಲೇಜಿನ ಗುರುತು ಚೀಟಿಯೊಂದಿಗೆ ಭಾಗವಹಿಸಬಹುದು. ದ.ಕ.ಜಿಲ್ಲೆಯಲ್ಲಿ ಚುನಾವಣೆಗೆ ಸ್ಪರ್ಧಿಸುವವರು ಆ.9ರ ಬೆಳಗ್ಗೆ 9 ಗಂಟೆಯಿಂದ ಆ.10ರ ಸಂಜೆ 5 ಗಂಟೆಯೊಳಗೆ ನಾಮಪತ್ರ ಸಲ್ಲಿಸಬೇಕು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸಂಘದ ಪದಾಕಾರಿಗಳಾದ ಶಿಫಲ್‌ರಾಜ್, ರಾಮನ್ ಜಿ, ಡೊನಾಲ್ಡ್ ನರೊನ್ಹಾ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News