ವಿಜಯ್ ರೂಪಾನಿ ಗುಜರಾತ್‌ನ ನೂತನ ಮುಖ್ಯಮಂತ್ರಿ

Update: 2016-08-05 12:52 GMT

ಅಹ್ಮದಾಬಾದ್, ಆ.5: ವಿಜಯ್ ರೂಪಾನಿ ಗುಜರಾತ್‌ನ ನೂತನ ಮುಖ್ಯಮಂತ್ರಿಯಾಗಿ ಶುಕ್ರವಾರ ಆಯ್ಕೆಯಾಗಿದ್ದಾರೆ. ನಿತಿನ್ ಪಟೇಲ್ ಉಪ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.

ಇಲ್ಲಿ ಶುಕ್ರವಾರ ನಡೆದ ಪಕ್ಷದ ಶಾಸಕಾಂಗ ಸಭೆಯಲ್ಲಿ ರೂಪಾನಿ ರಾಜ್ಯದ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಸಭೆಯಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಹಿರಿಯ ಮುಖಂಡ ನಿತಿನ್ ಗಡ್ಕರಿ ವೀಕ್ಷಕರಾಗಿ ಉಪಸ್ಥಿತರಿದ್ದರು.

ರಾಜ್ಯ ಬಿಜೆಪಿ ಅಧ್ಯಕ್ಷರಾಗಿದ್ದ ವಿಜಯ್ ರೂಪಾನಿ ಆನಂದಿಬೆನ್ ಪಟೇಲ್ ಸಂಪುಟದಲ್ಲಿ ಸಾರಿಗೆ, ನೀರು ಸರಬರಾಜು, ಕಾರ್ಮಿಕ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. 2014ರಲ್ಲಿ ಮೊದಲ ಬಾರಿ ರಾಜ್‌ಕೋಟ್ ಪಶ್ಚಿಮ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News