ಅರೆಬಿಕ್ ಸಹಿತ ಪಠ್ಯೇತರ ವಿಷಯಗಳ ಶಿಕ್ಷಣ ಸ್ಥಗಿತಗೊಳಿಸಿದ ಸೈಂಟ್ ಥೋಮಸ್ ಶಾಲೆ
Update: 2016-08-06 13:00 IST
ಮಂಗಳೂರು, ಆ.6: ವಿದ್ಯಾರ್ಥಿಗಳಿಗೆ ಒತ್ತಾಯಪೂರ್ವಕವಾಗಿ ಉರ್ದು ಮತ್ತು ಅರೆಬಿಕ್ ಭಾಷಾ ಶಿಕ್ಷಣವನ್ನು ನೀಡಲಾಗುತ್ತಿದೆ ಎಂಬ ಆರೋಪದಲ್ಲಿ ಶ್ರೀರಾಮಸೇನೆಯ ಕಾರ್ಯಕರ್ತರಿಂದ ದಾಳಿಗೊಳಗಾಗಿದ್ದ ಮಂಗಳೂರು ಹೊರವಲಯದ ಪಡು ಬೊಂಡಂತಿಲದ ಸೈಂಟ್ ಥೋಮಸ್ ಶಾಲೆಯಲ್ಲಿ ಅರೆಬಿಕ್ ಸಹಿತ ಇತರ ಪಠ್ಯೇತರ ವಿಷಯಗಳ ಶಿಕ್ಷಣವನ್ನು ಸ್ಥಗಿತಗೊಳಿಸಲಾಗಿದೆ.
ಶಾಲೆಯಲ್ಲಿ ಪಠ್ಯಕ್ಕೆ ಸಂಬಂಧಪಟ್ಟ ವಿಷಯಗಳ ಜೊತೆಗೆ ಫ್ರೆಂಚ್, ಜರ್ಮನಿ, ಅರೆಬಿಕ್, ಕರಾಟೆ ಮತ್ತಿತರ ಪಠ್ಯೇತರ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿತ್ತು. ಆದರೆ, ಶಾಲಾಡಳಿತ ಮಂಡಳಿಯ ತೀರ್ಮಾನದ ಹಿನ್ನೆಲೆಯಲ್ಲಿ ಶಿಕ್ಷಣ ಮಂಡಳಿಯು ನಿಗದಿಪಡಿಸಿದ ವಿಷಯಗಳನ್ನು ಹೊರತುಪಡಿಸಿ ಇತರ ಎಲ್ಲಾ ಬಗೆಯ ಶಿಕ್ಷಣವನ್ನು ಶಾಲೆಯಲ್ಲಿ ಸ್ಥಗಿತಗೊಳಿಸಲಾಗಿದೆ ಎಂದು ಶಾಲಾ ಮುಖ್ಯೋಪಾಧ್ಯಾಯ ಮೆಲ್ವಿನ್ ಬ್ರಾಗ್ಸ್ ‘ವಾರ್ತಾಭಾರತಿ’ಗೆ ತಿಳಿಸಿದ್ದಾರೆ.