ಕಾಸರಗೋಡು: ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ಕೇರಳದ ವಿದ್ಯಾರ್ಥಿಗಳಿಗೆ ಅಭಿನಂದನೆ
Update: 2016-08-06 18:23 IST
ಕಾಸರಗೋಡು, ಆ.6: ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು, ಕೇರಳ ರಾಜ್ಯ ಕನ್ನಡ ಮಾಧ್ಯಮ ಅಧ್ಯಾಪಕ ಸಂಘದ ಸಹಯೋಗದೊಂದಿಗೆ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ಕೇರಳದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ ಶನಿವಾರ ಎಡನೀರು ಮಠದ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಥೋಮ್ಸನ್ ಜೋಸ್ ಉದ್ಘಾಟಿಸಿದರು.
ಶಾಸಕರಾದ ಎನ್.ಎ. ನೆಲ್ಲಿಕುನ್ನು, ಪಿ.ಬಿ. ಅಬ್ದುರ್ರಝಾಕ್, ಜಿಲ್ಲಾ ಪಂಚಾಯತ್ ಸದಸ್ಯ ಕೆ.ಶ್ರೀಕಾಂತ್, ಪ್ರಾಧಿಕಾರದ ಅಧ್ಯಕ್ಷ ಡಾ.ಎಲ್. ಹನುಮಂತಯ್ಯ ಮತ್ತಿತರರು ಉಪಸ್ಥಿತರಿದ್ದರು.