×
Ad

ಕೋಲಾರದ ಕಿತ್ತಂಡೂರಿನಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ವೀರ ಯೋಧ ರಾಜೇಶ್ ಪಾರ್ಥಿವ ಶರೀರದ ಅಂತ್ಯಕ್ರಿಯೆ

Update: 2016-08-07 13:26 IST

ಕೋಲಾರ, ಆ.7:  ಅಸ್ಸಾಂ-ತ್ರಿಪುರಾ ಗಡಿಯಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ವೀರಮರಣವನ್ನಪ್ಪಿದ ರಾಜ್ಯದ ವೀರ ಯೋಧ ರಾಜೇಶ್ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು  ಕಿತ್ತಂಡೂರಿನ ಸರಕಾರಿ  ಶಾಲಾ ಆವರಣದಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ಇಂದು ನೆರವೇರಿಸಲಾಯಿತು.
ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಕೆ  ಆರ್ ರಮೇಶ್ ಕುಮಾರ್, ಕೋಲಾರ ಶಾಸಕ ವರ್ತೂರು ಪ್ರಕಾಶ್ ಅವರು ಸೇರಿದಂತೆ ಹಲವು ಸರಕಾರಿ ಅಧಿಕಾರಿಗಳು ಪಾಲ್ಗೊಂಡಿದ್ದರು. ಇದಕ್ಕೂ ಮೊದಲು ವೀರ ಯೋಧ ರಾಜೇಶ್ ಅವರ  ಪಾರ್ಥೀವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇರಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News