ಮಹಾ ಮಳೆಗೆ ಉತ್ತರ ಕರ್ನಾಟಕ ತತ್ತರ
ಬೆಳಗಾವಿ, ಆ. 7: ಕಳೆದ ನಾಲ್ಕೈದು ವರ್ಷಗಳಲ್ಲಿ ಭೀಕರ ಬರಗಾಲದಿಂದ ತತ್ತರಿಸಿದ್ದ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿಗ ಮಹಾರಾಷ್ಟ್ರದಲ್ಲಿನ ಭಾರೀ ಮಳೆ ಹಿನ್ನೆಲೆಯಲ್ಲಿ ಪ್ರವಾಹ ಭೀತಿ ಆರಂಭವಾಗಿದ್ದು, ಚಿಕ್ಕೋಡಿಯ ಆರು ಸೇತುವೆಗಳು ಸೇರಿದಂತೆ ಹತ್ತಾರು ಗ್ರಾಮಗಳು ಜಲಾವೃತ್ತವಾಗಿದ್ದು, ಅಕ್ಷರಶಃ ನಡುಗಡೆಯಾಗಿವೆ.
ಮಹಾರಾಷ್ಟ್ರದಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆ ರಾಜ್ಯದ ಮೇಲೂ ಪರಿಣಾಮ ಬೀರಿದ್ದು, ಬೆಳಗಾವಿ ಹಾಗೂ ಯಾದಗಿರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆಯಿಂದಾಗಿ ಕೃಷ್ಣಾನದಿಗೆಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ನದಿ ತೀರದ ಗ್ರಾಮಗಳಲ್ಲಿ ಆತಂಕ ಮನೆ ಮಾಡಿದೆ. ಇನ್ನು ಇದೇ ಕೃಷ್ಣಾನದಿ ತಟದಲ್ಲಿರುವ ರಾಜ್ಯದ ಗಡಿ ಜಿಲ್ಲೆಗಳಲ್ಲಿಯೂ ಮಳೆ ಪರಿಣಾಮ ಬೀರುತ್ತಿದ್ದು, ವೇದಗಂಗಾ, ದ್ೂಗಂಗಾನದಿಗಳಲ್ಲಿನೀರಿನಪ್ರಮಾಣಾರೀ ಪ್ರಮಾಣದಲ್ಲಿ ಹೆಚ್ಚಾಗಿದೆ. ಬೆಳಗಾವಿ ಜಿಲ್ಲೆ ಮತ್ತು ಮಹಾರಾಷ್ಟ್ರದ ಕೊಂಕಣ ತೀರದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೃಷ್ಣಾನದಿಗೆ ಅಡ್ಡಲಾಗಿ ನಿರ್ಮಿಸಿರುವ ಕಲ್ಲೋಳ-ಯಡೂರ, ಮಲಿಕವಾಡ-ದತ್ತವಾಡ, ಸಿದ್ನಾಳ-ಅಕ್ಕೋಳ, ಜತ್ರಾಟ-ಭೀವಶಿ, ಬೋಜವಾಡಿ- ಹುನ್ನರಗಿ ಹಾಗೂ ಕಾರದಗಾ-ಭೋಜ ಸೇತುವೆಗಳು ಸಂಪೂರ್ಣ ಜಲಾವೃತ ಗೊಂಡಿವೆ. ಇದರ ಪರಿಣಾಮ ಕೃಷ್ಣಾನದಿ ಪಾತ್ರದಲ್ಲಿ ನೀರಿನಮಟ್ಟ ಗಣನೀಯವಾಗಿ ಏರಿಕೆಯಾಗಿದ್ದು, ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ನಿಂದ 1 ಲಕ್ಷಕ್ಕೂ ಅಧಿಕ ಕ್ಯೂಸೆಕ್ಸ್ ನೀರನ್ನು ಕೃಷ್ಣಾ ನದಿಗೆ ಬಿಡಲಾಗಿದೆ.
ಇನ್ನು ಭಾರೀ ಮಳೆಯಿಂದಾಗಿ ಕೃಷ್ಣಾನದಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ಆಲಮಟ್ಟಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ ಹೆಚ್ಚಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಹೊರ ಹರಿವಿನ ಪ್ರಮಾಣವನ್ನು ಹೆಚ್ಚಿಸಲಾಗಿದೆ. ಆಲಮಟ್ಟಿಯಿಂದ ಹೆಚ್ಚಿನ ನೀರು ಹೊರ ಬಿಟ್ಟಿರುವುದರಿಂದ ಯಾದಗಿರಿ ಜಿಲ್ಲೆ ಬಸವಸಾಗರ ಜಲಾಶಯಕ್ಕೂ ಅಧಿಕ ಪ್ರಮಾಣದಲ್ಲಿ ನೀರು ಬರುತ್ತಿದ್ದು, ನದಿ ತೀರದ ಜುಮಾಲಪುರ, ಬೆಂಚಿಗಡ್ಡಿ, ನೀಲಕಂಠರಾಯನಗಡ್ಡಿ, ಬಂಡೋಳ್ಳಿ, ತಿಂಥಣಿ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿವೆ.