×
Ad

ಮಂಗಳೂರು: ಅತಿಥಿ ಉಪನ್ಯಾಸಕರ ನೇಮಕಾತಿ

Update: 2016-08-07 19:54 IST


ಮಂಗಳೂರು, ಆ.7: ನಗರದ ವಿಶ್ವದ್ಯಾನಿಲಯ ಸಂಧ್ಯಾ ಕಾಲೇಜಿನ ಪದವಿ ತರಗತಿಗಳಿಗೆ 2016-17ನೆ ಸಾಲಿಗೆ ಇಂಗ್ಲಿಷ್ ವಿಷಯಕ್ಕೆ ಅತಿಥಿ ಉಪನ್ಯಾಸಕರ ಅವಶ್ಯಕತೆ ಇದ್ದು, ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿ ಹೊಂದಿರುವ ಅರ್ಹ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ, ವರ್ಗ, ಅನುಭವ, ದೂರವಾಣಿ ಸಂಖ್ಯೆ ಇತ್ಯಾದಿ ಸ್ವವರವುಳ್ಳ ಅರ್ಜಿ ದಾಖಲೆಗಳ ಜೆರಾಕ್ಸ್ ಪ್ರತಿ ದಾಖಲೆಗಳೊಂದಿಗೆ ಆ. 8ರಂದು ಅಪರಾಹ್ನ 1ಗಂಟೆಗೆ ಕುಲಸಚಿವರ ಕಚೇರಿ, ಆಡಳಿತ ಸೌಧ,ಮಂಗಳೂರು ವಿಶ್ವವಿದ್ಯಾನಿಲಯ , ಮಂಗಳಗಂಗೋತ್ರಿ-574199 ಇಲ್ಲಿ ನಡೆಯಲಿರುವ ನೇರ ಸಂದರ್ಶನಕ್ಕೆ ಹಾಜರಾಗಬಹುದು.

    ಯು.ಜಿ.ಸಿ. ಎನ್.ಇ.ಟಿ./ಎಸ್.ಎಲ್.ಇ.ಟಿ. ಉತ್ತೀರ್ಣತೆ/ಪಿ.ಎಚ್.ಡಿ./ಎಂ.ಫಿಲ್ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು. ಹೆಚ್ಚಿನ ವಿವರಗಳನ್ನು ವಿಶ್ವವಿದ್ಯಾನಿಲಯದ ವೆಬ್‌ಸೈಟ್ www.mangaloreuniversity.ac.in  ನಿಂದ ಪಡೆಯಬಹುದೆಂದು ಕುಲಸಚಿವರ ಕಚೇರಿ ಪ್ರಕಟನೆ ತಿಳಿಸಿದೆ.
    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News