ಅತಿಥಿ ಉಪನ್ಯಾಸಕರ ನೇಮಕಾತಿ

Update: 2016-08-07 18:21 GMT


ಮಂಗಳೂರು, ಆ.7: ನಗರದ ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನ ಪದವಿ ತರಗತಿಗಳಿಗೆ 2016-17ನೆ ಸಾಲಿಗೆ ಇಂಗ್ಲಿಷ್ ವಿಷಯಕ್ಕೆ ಅತಿಥಿ ಉಪನ್ಯಾಸಕರ ಆವಶ್ಯಕತೆ ಇದ್ದು, ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿ ಗಳಿಸಿರುವ ಅರ್ಹ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ, ವರ್ಗ, ಅನುಭವ, ದೂರವಾಣಿ ಸಂಖ್ಯೆ ಇತ್ಯಾದಿ ಸ್ವವಿವರವುಳ್ಳ ಅರ್ಜಿ ದಾಖಲೆಗಳ ಜೆರಾಕ್ಸ್ ಪ್ರತಿಯೊಂದಿಗೆ ಆ.8ರಂದು ಅಪರಾಹ್ನ 1 ಗಂಟೆಗೆ ಕುಲಸಚಿವರ ಕಚೇರಿ, ಆಡಳಿತ ಸೌಧ, ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿ-574199 ಇಲ್ಲಿ ನಡೆಯಲಿರುವ ನೇರ ಸಂದರ್ಶನಕ್ಕೆ ಹಾಜರಾಗಬಹುದು.

ಯು.ಜಿ.ಸಿ. ಎನ್.ಇ.ಟಿ./ಎಸ್.ಎಲ್.ಇ.ಟಿ. ಉತ್ತೀರ್ಣತೆ/ಪಿ.ಎಚ್.ಡಿ./ಎಂ.ಫಿಲ್ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು. ಹೆಚ್ಚಿನ ವಿವರಗಳನ್ನು ವಿಶ್ವ ವಿದ್ಯಾನಿಲಯದ ವೆಬ್‌ಸೈಟ್ www.mangaloreuniversity.ac.in ನಿಂದ ಪಡೆಯಬಹುದೆಂದು ಕುಲಸಚಿವರ ಕಚೇರಿ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News