ಭಾಸ್ಕರ್ ಶೆಟ್ಟಿ ಕೊಲೆ: ಪತ್ನಿ ಮಗ ಪೊಲೀಸ್ ಕಸ್ಟಡಿಗೆ

Update: 2016-08-08 07:40 GMT

ಉಡುಪಿ, ಆ.8: ಉದ್ಯಮಿ ಭಾಸ್ಕರ್ ಶೆಟ್ಟಿಯನ್ನು ಕೊಲೆಗೈದು ಹೋಮ ಕುಂಡದಲ್ಲಿ ಸುಟ್ಟು ಹಾಕಿರುವ ಪ್ರಕರಣದಲ್ಲಿ ಬಂಧಿತರಾಗಿರುವ ಪತ್ನಿ ರಾಜೇಶ್ವರಿ ಶೆಟ್ಟಿ ಹಾಗೂ ಮಗ ನವನೀತ್‌ಗೆ ಉಡುಪಿ ನ್ಯಾಯಾಲಯ 4 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಇಂದು ಬೆಳಗ್ಗೆ ಉಡುಪಿಯ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ನ್ಯಾಯಾಲಯ ಮತ್ತು ಹೆಚ್ಚುವರಿ ಮುಖ್ಯ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾ ಲಯದ ಮುಂದೆ ಆರೋಪಿಗಳಿಬ್ಬರನ್ನು ಪ್ರಕರಣದ ತನಿಖಾಧಿಕಾರಿ ಮಣಿಪಾಲ ಪೊಲೀಸ್ ಠಾಣಾ ನಿರೀಕ್ಷಕ ಗಿರೀಶ್ ಹಾಜರುಪಡಿಸಿದರು. ಆರೋಪಿಗಳನ್ನು 9 ದಿನಗಳ ಪೊಲೀಸ್ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು.

ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಗಳಿಬ್ಬರನ್ನು ಆ.12ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News