ಸೋನಿಯಾ ಗಾಂಧಿ ಚೇತರಿಕೆಗೆ ಹಾರೈಸಿ ಕುದ್ರೋಳಿ ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ

Update: 2016-08-08 08:35 GMT

ಮಂಗಳೂರು, ಆ.8: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಅನಾರೋಗ್ಯಕ್ಕೀಡಾಗಿರುವ ಹಿನ್ನೆಲೆಯಲ್ಲಿ ಅವರು ಶೀಘ್ರ ಚೇತರಿಸಿಕೊಳ್ಳುವಂತೆ ಹಾರೈಸಿ, ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ಧನ ಪೂಜಾರಿ, ವಿಧಾನಪರಿಷತ್ ಸದಸ್ಯೆ ಮೋಟಮ್ಮ ಅವರ ನೇತೃತ್ವದಲ್ಲಿ ದೇವರಿಗೆ ರುದ್ರಾಭಿಷೇಕ ಸೇವೆ ಸಲ್ಲಿಸಿ ವಿಶೇಷ ಪ್ರಾರ್ಥನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಶಾಸಕ ಜೆ.ಆರ್. ಲೋಬೊ, ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಮಹಾಬಲ ಮಾರ್ಲ, ಕೆಎಸ್ಸಾರ್ಟಿಸಿ ನಿರ್ದೇಶಕ ಟಿ.ಕೆ. ಸುಧೀರ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News