ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ಆರೋಪಿ ನಿರಂಜನ್ ಭಟ್‌ನಿಂದ ಆತ್ಮಹತ್ಯೆ ಯತ್ನ
Update: 2016-08-09 11:01 IST
ಉಡುಪಿ, ಆ.9: ಉಡುಪಿಯ ಉದ್ಯಮಿ ಭಾಸ್ಕರ್ ಶೆಟ್ಟಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಶದಲ್ಲಿರುವ ಆರೋಪಿ ನಿರಂಜನ್ ಭಟ್ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಭಾಸ್ಕರ್ ಶೆಟ್ಟಿಯವರ ಕೊಲೆ ಪ್ರಕರಣದ ಬಲಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಸೋಮವಾರ ವಶಕ್ಕೆ ಪಡೆದಿದ್ದರು. ಪೊಲೀಸರ ವಶದಲ್ಲಿದ್ದ ಆರೋಪಿಯು ಮಂಗಳವಾರ ಮುಂಜಾನೆ ವೇಳೆ ಉಂಗುರದಲ್ಲಿದ್ದ ವಜ್ರದ ಹರಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ.
ತೀವ್ರವಾಗಿ ಅಸ್ವಸ್ಥಗೊಂಡಿರುವ ನಿರಂಜನ್ ಭಟ್‌ಗೆ ಉಡುಪಿಯ ಅಜ್ಜರಕಾಡಿನಲ್ಲಿರುವ ಸರಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.