ಆಬ ಮಹಿಳಾ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ಸಂಘ ಉದ್ಘಾಟನೆ
ಮಂಗಳೂರು, ಆ. 9: ಸುರತ್ಕಲ್‌ನ ಆಬ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಗಸ್ಟ್ 8ರಂದು ವಿದ್ಯಾರ್ಥಿ ಸಂಘದ ಉದ್ಘಾಟನೆಯು ನಡೆಯಿತು. ಚೇಳ್ಯಾರ್ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕುಶರತಿ ವಿದ್ಯಾರ್ಥಿನಿಯರಿಗೆ ಅಧಿಕಾರವನ್ನು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಹಿಳೆಯರನ್ನು ಯಾವಾಗಲೂ ಪ್ರಕೃತಿಗೆ ಹೋಲಿಕೆ ಮಾಡುತ್ತೇವೆ. ಸಮಾಜದಲ್ಲಿ ನಾವು ಮುಂದೆ ಬರಬೇಕಾದರೆ ಹಾಗೂ ಧೈರ್ಯದಿಂದ ಬಾಳಬೇಕಾದರೆ ಶೈಕ್ಷಣಿಕ ವಲಯದಲ್ಲಿ ನಮ್ಮನ್ನು ತೊಡಗಿಸಿಕೊಳ್ಳಬೇಕು ಹಾಗೂ ವಿದ್ಯಾರ್ಥಿ ಸಂಘದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ಎಂದು ವಿದ್ಯಾರ್ಥಿನಿಯರಿಗೆ ಸಲಹೆ ನೀಡಿದರು.
ಕಾಲೇಜಿನ ಅಧ್ಯಕ್ಷ ಮುಹಮ್ಮದ್ ರಫೀಕ್ ಮಾತನಾಡಿ, ಒಂದು ಹೆಣ್ಣು ವಿದ್ಯಾವಂತಳಾದರೆ ಒಂದು ಕುಟುಂಬ ವಿದ್ಯಾವಂತ ಕುಟುಂಬ ಆದಂತೆ ಎಂದರು.
ವಿದ್ಯಾರ್ಥಿ ಸಂಘದ ನಿರ್ದೇಶಕಿ ವನಿತಾ ಪ್ರತಿಜ್ಞಾ ವಿಧಿ ಬೋಧಿಸಿದರು. ಉಪನ್ಯಾಸಕಿ ಜೆನಿಶಾ ಸ್ವಾಗತಿಸಿ, ಪ್ರತೀಕ್ಷಾ ವಂದಿಸಿದರು. ಉಪನ್ಯಾಸಕಿ ಸಂಗೀತಾ ಕಾರ್ಯಕ್ರಮ ನಿರೂಪಿಸಿದರು.