ಆ.10ರಂದು ಪುತ್ತೂರಿಗೆ ನೀರು ಸರಬರಾಜಿನಲ್ಲಿ ವ್ಯತ್ಯಯ
Update: 2016-08-09 19:42 IST
ಪುತ್ತೂರು, ಆ.9: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಕಾರಣ ಅನಿಲ ಸೋರಿಕೆಯಾಗಿ ನದಿ ನೀರಿನಲ್ಲಿ ಮಿಶ್ರಣಗೊಂಡಿರುವ ಕಾರಣ ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಆ.10ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಪೌರಾಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ನೀರಿನಲ್ಲಿ ಅನಿಲ ಮಿಶ್ರಣಗೊಂಡಿರುವ ಕಾರಣ ಪುತ್ತೂರು ನಗರಕ್ಕೆ ನೀರು ಸರಬರಾಜು ಮಾಡುವ ಕುಮಾರಧಾರಾ ನದಿಯ ನೆಕ್ಕಿಲಾಡಿ ಪಂಪ್‌ಹೌಸ್‌ನಲ್ಲಿ ಮಂಗಳವಾರ ಪಂಪಿಂಗ್ ನಿಲ್ಲಿಸಲಾಗಿದೆ. ಇದರಿಂದಾಗಿ ಬುಧವಾರ ನಗರ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಅವರು ತಿಳಿಸಿದ್ದಾರೆ.