×
Ad

ಸುಳ್ಳು ಜಾತಿ ಪ್ರಮಾಣಪತ್ರ ಸಲ್ಲಿಸಿದ್ದಕ್ಕಾಗಿ 19 ವೈದ್ಯಕೀಯ ವಿದ್ಯಾರ್ಥಿಗಳ ಉಚ್ಚಾಟನೆ

Update: 2016-08-10 18:44 IST

ಮುಂಬೈ,ಆ.10: ಮುಂಬೈ ಮತ್ತು ಕೊಲ್ಲಾಪುರಗಳಲ್ಲಿಯ ಸರಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕೋಟಾದಡಿ ಪ್ರವೇಶ ಪಡೆಯಲು ಸುಳ್ಳು ಜಾತಿ ಪ್ರಮಾಣಪತ್ರಗಳನ್ನು ಸಲ್ಲಿಸಿದ್ದಕ್ಕಾಗಿ 19 ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಮಹಾರಾಷ್ಟ್ರದ ವೈದ್ಯಕೀಯ ಶಿಕ್ಷಣ ಅಧಿಕಾರಿಗಳು ಉಚ್ಚಾಟನೆಗೊಳಿಸಿದ್ದಾರೆ.

ಎಸ್‌ಸಿ/ಎಸ್‌ಟಿ ಕೋಟಾದಡಿ ಪ್ರವೇಶ ಪಡೆದಿರುವ ಎಲ್ಲ ವಿದ್ಯಾರ್ಥಿಗಳ ಜಾತಿ ಪ್ರಮಾಣಪತ್ರಗಳನ್ನು ದೃಢಪಡಿಸಿಕೊಳ್ಳುವಂತೆಯೂ ರಾಜ್ಯದಲ್ಲಿಯ ಎಲ್ಲ ಸರಕಾರಿ ಮೆಡಿಕಲ್ ಕಾಲೇಜುಗಳಲ್ಲಿ ಪ್ರವೇಶಗಳ ಮೇಲೆ ನಿಗಾಯಿರಿಸುವ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ನಿರ್ದೇಶನಾಲಯವು ಸೂಚಿಸಿದೆ ಎಂದು ಹೇಳಿದ ಅಧಿಕಾರಿಯೋರ್ವರು, ಉಚ್ಚಾಟಿತ ವಿದ್ಯಾರ್ಥಿಗಳ ವಿರುದ್ಧ ಪೊಲೀಸ್ ದೂರುಗಳನ್ನು ಸಲ್ಲಿಸಲಾಗಿದೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News