×
Ad

ರಕ್ತದ ಆವಶ್ಯಕತೆ ಇದಾಗಲೇ ರಕ್ತದಾನದ ಮಹತ್ವ ತಿಳಿಯುತ್ತದೆ: ಜಿಲ್ಲಾಧಿಕಾರಿ ಎಸ್.ಎಸ್.ನಕುಲ್

Update: 2016-08-10 22:09 IST

ಕಾರವಾರ,ಆ.10: ರಕ್ತದ ಆವಶ್ಯಕತೆ ಇಂದಿನ ದಿನಗಳಲ್ಲಿ ಹೆಚ್ಚಾಗಿದ್ದು, ಮಹಿಳೆಯರ ಹೆರಿಗೆಯ ಸಂದಭರ್ದಲ್ಲಿ, ಶಸ್ತ್ರ ಚಿಕಿತ್ಸೆಯ ಸಂದಭರ್ದಲ್ಲಿ ಹಾಗೂ ಅಪಘಾತದ ವೇಳೆ ಹೆಚ್ಚಾಗಿ ರೋಗಿಗಳಿಗೆ ರಕ್ತದ ಆವಶ್ಯಕತೆ ಬೀಳುತ್ತದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಳಿದರು

. ಅವರು, ಕಾರವಾರ ಆಝಾದ್ ಯೂಥ್ ಕ್ಲಬ್, ರಾಬಿಯಾಬಿ ಶೇಖ್ ಇಸ್ಮಾಯೀಲ್ ಮೆಮೋರಿಯಲ್, ಎಜ್ಯುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್, ಲಯನ್ಸ್ ಕ್ಲಬ್, ಕಲ್ಲೂರ್ ಎಜ್ಯುಕೇಶನ್ ಟ್ರಸ್ಟ್ ಹಾಗೂ ಜಿಲ್ಲಾ ಆಸ್ಪತ್ರೆ ಕಾರವಾರ ಇವರ ಸಹಯೋಗದಲ್ಲಿ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದಲ್ಲಿ ನಡೆದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಆರೋಗ್ಯವಂತ ವ್ಯಕ್ತಿಗಳು ನಿಯಮಿತವಾಗಿ ರಕ್ತದಾನ ಮಾಡಬೇಕು ಜೊತೆಗೆ ಸಂಘ ಸಂಸ್ಥೆಗಳು ಬೃಹತ್ ರಕ್ತದಾನ ಶಿಬಿರಗಳನ್ನು ಆಯೋಜಿಸಿ ಸಾರ್ವಜನಿಕರಿಗೆ ಸಹಕರಿಸಬೇಕು ಎಂದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಜಿ.ಎನ್.ಅಶೋಕ್ ಕುಮಾರ್ ಮಾತನಾಡಿ, ಹೆಚ್ಚು ಹೆಚ್ಚು ರಕ್ತದಾನಿಗಳು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಬೇಕು ಎಂದರು.ಜಿಲ್ಲಾ ಆಸ್ಪತ್ರೆಯ ಶಸ್ತ್ರ ಚಿಕಿತ್ಸಕರಾದ ಡಾ. ಶಿವಾನಂದ ಕುಡ್ತರ್ಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ನಝೀರ್ ಅಹ್ಮದ್ ಯು.ಶೇಕ್, ರಾಬಿಯಾಬಿ ಮೆಮೋರಿಯಲ್ ಟ್ರಸ್ಟ್‌ನ ಅಧ್ಯಕ್ಷರಾದ ಎಮ್. ಇ. ಶೇಕ್, ಲಯನ್ಸ್ ಕ್ಲಬ್‌ನ ಅಧ್ಯಕ್ಷರಾದ ಲ.ಹನೀಫ್ ಮುಲ್ಲಾ, ಭಾರತೀಯ ರೆಡ್ ಕ್ರಾಸ್‌ನ ಸದಸ್ಯೆ ಫೈರೋಝಾ ಬೇಗಂ ಶೇಕ್, ಕಲ್ಲೂರ್ ಎಜ್ಯುಕೇಶನ್ ಟ್ರಸ್ಟ್‌ನಅಧ್ಯಕ್ಷ ಇಬ್ರಾಹೀಂ ಕಲ್ಲೂರ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News