×
Ad

ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ನಿರಂಜನ್ ಭಟ್ ತಂದೆ ಮತ್ತು ಕಾರು ಚಾಲಕನ ಸೆರೆ

Update: 2016-08-11 12:27 IST

ಉಡುಪಿ, ಆ.11: ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮತ್ತಿಬ್ಬರನ್ನು ಮಣಿಪಾಲ ಪೊಲೀಸರು ಬಂಧಿಸಿದ್ದು, ಅವರಿಗೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಕೊಲೆ ಪ್ರಕರಣದ ಆರೋಪಿ ನಿರಂಜನ್ ಭಟ್‌ನ ತಂದೆ ಶ್ರೀನಿವಾಸ ಭಟ್ ಹಾಗೂ ಕಾರು ಚಾಲಕ ರಾಘು ಯಾನೆ ರಾಘವೇಂದ್ರ ಬಂಧಿತ ಆರೋಪಿಗಳು. ಇವರನ್ನು ನಿನ್ನೆ ರಾತ್ರಿ ಪೊಲೀಸರು ಬಂಧಿಸಿದ್ದಾರೆ. ಸಾಕ್ಷ ನಾಶಪಡಿಸಿದ ಆರೋಪದಲ್ಲಿ ಈ ಬಂಧನ ನಡೆದಿದೆ.
ಇವರಿಬ್ಬರನ್ನು ಇಂದು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆ.24ರವರೆಗೆ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಇದರೊಂದಿಗೆ ಭಾಸ್ಕರ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರ ಒಟ್ಟು ಸಂಖ್ಯೆ ಐದಕ್ಕೇರಿದೆ. ಭಾಸ್ಕರ ಶೆಟ್ಟಿಯ ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ ಹಾಗೂ ಜ್ಯೋತಿಷಿ ನಿರಂಜನ್ ಭಟ್‌ನನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ.
ಇದೇ ವೇಳೆ ಭಾಸ್ಕರ ಶೆಟ್ಟಿಯವರ ಮೃತದೇಹದ ಅವಶೇಷಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News