ಕೆರೆ-ರಾಜಕಾಲುವೆ ಒತ್ತುವರಿ ತೆರವಿಗೆ ಆಗ್ರಹಿಸಿ ಧರಣಿ
ಶಿವಮೊಗ್ಗ, ಆ. 11: ಬೆಂಗಳೂರು ಮಾದರಿಯಲ್ಲಿ ಶಿವಮೊಗ್ಗ ನಗರದಲ್ಲಿಯೂ ಕೆರೆ-ರಾಜಕಾಲುವೆ ಒತ್ತುವರಿ ಮಾಡಿ ನಿರ್ಮಿಸಿರುವ ಕಟ್ಟಡಗಳನ್ನು ತೆರವುಗೊಳಿ ಸಬೇಕು ಎಂದು ಆಗ್ರಹಿಸಿ ಅಣ್ಣಾ ಹಝಾರೆ ಹೋರಾಟ ಸಮಿತಿಯು ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಧರಣಿ ನಡೆಸಿ, ಜಿಲ್ಲಾಡಳಿತಕ್ಕೆ ಮನವಿ ಪತ್ರ ಸಲ್ಲಿಸಿತು. ಪ್ರಸ್ತುತ ಶಿವಮೊಗ್ಗ ನಗರವು ದಿನದಿಂದ ದಿನಕ್ಕೆ ಬೆಳವಣಿಗೆ ಹೊಂದುತ್ತಿದೆ. ವಸತಿ ಬೇಡಿಕೆ ಹೆಚ್ಚಾಗುತ್ತಿದೆ. ಇದರಿಂದ ಹೊಸ ಹೊಸ ಬಡಾವಣೆಗಳು ನಿರ್ಮಾಣವಾಗುತ್ತಿವೆ. ಈ ನಡುವೆ ಕೆಲ ಭೂ ಮಾಫಿಯಾದವರು ಅನಧಿಕೃತವಾಗಿ ಕೆರೆ, ರಾಜಕಾಲುವೆ ಒತ್ತುವರಿ ಮಾಡಿ ನಿವೇಶನ ರಚಿಸುತ್ತಿದ್ದಾರೆ. ಇದನ್ನೇ ನಾಗರಿಕರಿಗೆ ಹಂಚಿಕೆ ಮಾಡಿ ವಂಚಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ. ಈಗಾಗಲೇ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಭಾರೀ ದೊಡ್ಡ ಪ್ರಮಾಣದಲ್ಲಿ ಕೆರೆ ಗಳ ಒತ್ತುವರಿ ಮಾಡಲಾಗಿದೆ. ಆದರೆ, ಈ ಒತ್ತುವರಿ ತೆರವುಗೊಳಿಸಿ ಸಂರಕ್ಷಣೆ ಮಾಡುವ ಲ್ಲಿ ಜಿಲ್ಲಾಡಳಿತ ಪ್ರಾಮಾಣಿಕ ಪ್ರಯತ್ನ ನಡೆಸಿಲ್ಲ. ಇತ್ತೀಚೆಗೆ ಬೆಂಗಳೂರಿನಲ್ಲಿ ಕೆರೆ-ರಾಜಕಾಲುವೆಗಳ ಒತ್ತುವರಿ ಮಾಡಿ ಕಟ್ಟಡ ನಿರ್ಮಾಣ ಮಾಡಿದ್ದರಿಂದ ಮಳೆ ನೀರು ಬಡಾವಣೆಗಳಿಗೆ ನುಗ್ಗಿ ಭಾರೀ ಪ್ರಮಾದ ನಷ್ಟ ಉಂಟಾಗಿತ್ತು.
ುುಂದಿನ ದಿನಗಳಲ್ಲಿ ಶಿವಮೊಗ್ಗದಲ್ಲಿಯೂ ಅದೇ ರೀತಿಯ ಪರಿಸ್ಥಿತಿ ನಿರ್ಮಾಣ ವಾಗುವುದು ನಿಶ್ಚಿತವಾಗಿದ್ದು, ಇನ್ನಾದರೂ ಜಿಲ್ಲಾಡಳಿತ ಎಚ್ಚೆತ್ತುಕೊಂಡು ಕೆರೆಗಳ ಸಂರಕ್ಷಣೆ ಮಾಡಬೇಕು. ಒತ್ತುವರಿ ತೆರವಿಗೆ ಕಠಿಣ ಕ್ರಮ ಜರಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಆದೇಶ ಪಾಲಿಸಿ: ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಪೀಠ (ಎನ್‌ಜಿಪಿ) ಮೇ. 4 ರಂದು ಹೊರಡಿಸಿದ ಆದೇಶದಲ್ಲಿ ಕಟ್ಟಡಗಳ ನಿರ್ಮಾಣಕ್ಕೆ ಅನುಮತಿ ನೀಡುವಾಗ ಸಂಬಂಧಪಟ್ಟ ಪ್ರಾಧಿಕಾರಗಳ ಅನುಮತಿ ಪಡೆಯುವುದು ಕಡ್ಡಾಯಗೊಳಿಸಿದೆ. ಉದ್ದೇಶಿತ ಕಟ್ಟಡಕ್ಕೆ ಕೆರೆ ಅಥವಾ ರಾಜ ಕಾಲುವೆಯಿಂದ 75 ಮೀಟರ್ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಿದೆ. ರಾಜ ಕಾಲುವೆಯ ವಿವಿಧ ಪ್ರವರ್ಗಗಳಾದ ಪ್ರೈಮರಿ ನಾಲಾ ಅಂಚಿನಿಂದ 50 ಮೀಟರ್, ಸೆಕೆಂಡರಿ ನಾಲಾ ಅಂಚಿನಿಂದ 35 ಮೀಟರ್ ಮತ್ತು ಟರ್ನರಿ ನಾಲಾ ಅಂಚಿನಿಂದ 25 ಮೀಟರ್ ಅಂತರ ಕಾಯ್ದುಕೊಳ್ಳಲು ಆದೇಶಿಸಿದೆ. ಈಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.