×
Ad

ಝಕರಿಯಾ ಜೋಕಟ್ಟೆಯವರಿಗೆ ‘ಸ್ಟಾರ್ ಆಫ್ ಬ್ಯಾರೀಸ್’ ಪ್ರಶಸ್ತಿ

Update: 2016-08-12 20:37 IST

ಮಂಗಳೂರು, ಆ.12: ದುಬೈನ ಬ್ಯಾರೀಸ್ ಕಲ್ಚರಲ್ ಫೋರಂ (ಬಿಸಿಎಫ್) ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿದ್ಯಾರ್ಥಿ ವೇತನ, ಗಾಲಿಕುರ್ಚಿ ಹಾಗೂ ಹೊಲಿಗೆ ಯಂತ್ರ ಸೇರಿ ಒಟ್ಟು 25 ಲಕ್ಷ ರೂ. ವೌಲ್ಯದ ವಿವಿಧ ಸವಲತ್ತುಗಳನ್ನು ವಿತರಿಸಲು ನಿರ್ಧರಿಸಲಾಗಿದೆ.

ಸುದ್ದಿಗೋಷ್ಠಿಯಲ್ಲಿಂದು ಈ ವಿಷಯ ತಿಳಿಸಿದ ಬಿಸಿಎಫ್‌ನ ಉಪಾಧ್ಯಕ್ಷ ಹಾಗೂ ವಿದ್ಯಾರ್ಥಿ ವೇತನ ಸಮಿತಿಯ ಅಧ್ಯಕ್ಷ ಎಂ.ಇ. ಮೂಳೂರು, ಆ.14ರಂದು ನಗರದ ಸೈಂಟ್ ಅಲೋಶಿಯಸ್ ಕಾಲೇಜಿನ ಲೊಯೊಲಾ ಸಭಾಂಗಣದಲ್ಲಿ ಬೆಳಗ್ಗೆ 9:30ರಿಂದ ಕಾರ್ಯಕ್ರಮಗಳು ನಡೆಯಲಿದೆ ಎಂದರು.

ಕಳೆದ 14 ವರ್ಷಳಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಬಿಸಿಎಫ್ ನೀಡುತ್ತಿದ್ದು, ಈ ವರ್ಷ ಪಿಯುಸಿಯಿಂದ ಸ್ನಾತಕೋತ್ತರ ಪದವಿ ತನಕದ 600ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುವುದು. 25 ಮಂದಿ ವಿಕಲಚೇತನರಿಗೆ ಗಾಲಿಕುರ್ಚಿ, 25 ಮಂದಿಗೆ ಹೊಲಿಗೆ ಯಂತ್ರಗಳನ್ನು ವಿತರಿಲಾಗುವುದು. ಅಲ್ಲದೆ, ಜುಬೈಲ್‌ನ ಅಲ್ ಮುಝೈನ್ ಕಂಪನಿಯ ಮುಖ್ಯಸ್ಥ ಝಕರಿಯಾ ಜೋಕಟ್ಟೆಯವರಿಗೆ ‘ಸ್ಟಾರ್ ಆಫ್ ಬ್ಯಾರೀಸ್ 2016’ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಎಸೆಸೆಲ್ಸಿ ಹಾಗೂ ಪಿಯುಸಿ ತರಗತಿಯ ಮೂರು ವಿಭಾಗಳಲ್ಲಿ ಅತ್ಯಧಿಕ ಅಂಕ ಪಡೆದ 9 ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ಓರ್ವ ಕ್ರೀಡಾಪಟುವಿಗೆ ‘ಬಿಸಿಎಫ್ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಹೇಳಿದರು.

 ಆ.14ರಂದು ಬೆಳಗ್ಗೆ 9:30ಕ್ಕೆವೃತ್ತಿ ಮಾರ್ಗದರ್ಶನ ಶಿಬಿರವನ್ನು ಆಯೋಜಿಸಿದ್ದು, ಉಡುಪಿ ಜಿಲ್ಲಾ ಸಂಯುಕ್ತ ಖಾಝಿ ಅಲ್‌ಹಾಜ್ ಇಬ್ರಾಹೀಂ ಮುಸ್ಲಿಯಾರ್ ಬೇಕಲ್ ದುಆ ನೆರವೇರಿಸಲಿದ್ದಾರೆ. ಶಾಸಕ ಜೆ.ಆರ್. ಲೋಬೊ ಶಿಬಿರವನ್ನು ಉದ್ಘಾಟಿಸುವರು. ವೃತ್ತಿ ಮಾರ್ಗದರ್ಶನ ಶಿಬಿರವನ್ನು ಯುಎಇ ಲಂಡನ್ ಅಮೆರಿಕನ್ ಸಿಟಿ ಕಾಲೇಜಿನ ನಿರ್ದೇಶಕ ಡಾ.ಪ್ರೊ.ಕಾಪು ಮುಹಮ್ಮದ್ ನಡೆಸಲಿದ್ದಾರೆ. ಬಿಸಿಎಫ್ ಅಧ್ಯಕ್ಷ ಡಾ. ಬಿ.ಕೆ. ಯೂಸುಫ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಡಾ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್ ಮುಖ್ಯ ಭಾಷಣ ಮಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಎಸ್.ಎಂ. ರಶೀದ್ ಹಾಜಿ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಬಿ.ಎ. ಮುಹಮ್ಮದ್ ಹನೀಫ್, ಮನಪಾ ಆಯುಕ್ತ ಮುಹಮ್ಮದ್ ನಝೀರ್ ಮೊದಲಾವದರು ಭಾಗವಹಿಸಲಿದ್ದಾರೆ. ಅಪರಾಹ್ನ 2:30ಕ್ಕೆ ಬಿಸಿಎಫ್‌ನಿಂದ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮ ನಡೆಯಲಿದೆ. ಬಿಸಿಎಫ್‌ನ ಮುಖ್ಯ ಸಲಹೆಗಾರ ಹಾಗೂ ಝೈನ್ ಇಂಟರ್‌ನ್ಯಾಷನಲ್ ಗ್ರೂಪ್ ಆಫ್ ಹೊಟೇಲ್ಸ್‌ನ ಆಡಳಿತ ನಿರ್ದೇಶಕ ಝಫರುಲ್ಲಾ ಖಾನ್ ಉದ್ಘಾಟಿಸಲಿದ್ದಾರೆ. ಸಮಾರಂಭದಲ್ಲಿ ವಿವಿಧ ರಾಜಕೀಯ, ಸಾಮಾಜಿಕ ನೇತಾರರು ಭಾಗವಹಿಸಲಿದ್ದಾರೆ.

ವಿದೇಶದಿಂದ ಗೌರವ ಅತಿಥಿಗಳಾಗಿ ಬಿಸಿಎಫ್ ರಾಯಭಾರಿ ಮತ್ತು ದರ್ವೇಶ್ ಗ್ರೂಪ್‌ನ ಮುಖ್ಯಸ್ಥ ಹಸನ್ ದರ್ವೇಶ್, ಗಲ್ಫ್ ಮೆಡಿಕಲ್ ಯುನಿವರ್ಸಿಟಿಯ ಅಧ್ಯಕ್ಷ ಡಾ. ತುಂಬೆ ಮೊಯ್ದಿನ್, ಬರ್ಶ ಇಂಟರ್ ನ್ಯಾಷನಲ್ ಗ್ರೂಪ್‌ನ ಆಡಳಿತ ನಿರ್ದೇಶಕ ಫತಾವುಲ್ಲಾ ಸಾಹೇಬ್ ತೋನ್ಸೆ, ಧರಹ್ಮಾ ಗ್ರೂಪ್ ಕೆಎಸ್‌ಎಯ ಆಡಳಿತ ನಿರ್ದೇಶಕ ಶೇಖ್ ಶರೀಫ್, ಬಿಡಬ್ಲುಎಫ್ ಅಬುದಾಭಿ ಅಧ್ಯಕ್ಷ ಮುಹಮ್ಮದ್ ಅಲಿ ಉಚ್ಚಿಲ್, ಡಿಕೆಎಸ್‌ಸಿ ಅಧ್ಯಕ್ಷ ಅಬ್ದುಲ್ ಹಮೀದ್, ಬಿಲ್ಲವ ಅಸೋಸಿಯೇಶನ್‌ನ ದುಬೈನ ಅಧ್ಯಕ್ಷ ಸತೀಶ್ ಪೂಜಾರಿ, ಬಿಡಬ್ಲುಎಫ್ ಅಬುದಾಭಿಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ಲಾ ಮದುಮೂಲೆ ಭಾಗವಹಿಸಲಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಬಿಸಿಎಫ್ ಪ್ರಧಾನ ಕಾರ್ಯದರ್ಶಿ ಡಾ. ಕಾಪು ಮುಹಮ್ಮದ್, ಪೋಷಕ ಬಿ.ಎಂ. ಮುಮ್ತಾಝ್ ಅಲಿ, ಉಪಾಧ್ಯಕ್ಷರಾದ ಅಬ್ದುಲ್ ಲತೀಫ್ ಮುಲ್ಕಿ, ಅಫೀಖ್ ಹುಸೇನ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News