×
Ad

ದೇವರಾಜ ಅರಸರ ಅಪೇಕ್ಷೆಯನ್ನು ಈಡೇರಿಸಬೇಕಾದ ಅಗತ್ಯವಿದೆ: ಸಚಿವ ರೈ

Update: 2016-08-13 10:53 IST

ಮಂಗಳೂರು, ಆ.13: ಜಿಲ್ಲೆಯಲ್ಲಿ ಮತೀಯ ಸಾಮರಸ್ಯಕ್ಕೆ ತೊಡಕಾಗುವಂತಹ ಪರಿಸ್ಥಿತಿ ಇರುವ ಸಂದರ್ಭದಲ್ಲಿ  ಮನುಷ್ಯ ಮನುಷ್ಯರ ನಡುವೆ ಸಾಮರಸ್ಯ ಮೂಡಿಸಬೇಕೆಂಬ  ದೇವರಾಜು ಅರಸು ಅವರ ಅಪೇಕ್ಷೆಯನ್ನು ಈಡೇರಿಸಬೇಕಾದ ಅಗತ್ಯವಿದೆ ಎಂದು ದ.ಕ ಜಿಲ್ಲಾ ಉಸ್ತುವಾರಿ  ಸಚಿವ ಬಿ. ರಮಾನಾಥ ರೈ ಹೇಳಿದ್ದಾರೆ.

ಅವರು ನಗರದ ಸಹೋದಯ ಸಭಾಂಗಣದಲ್ಲಿ ದ.ಕ ಜಿಲ್ಲಾಡಳಿತ, ದ.ಕ ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ,  ವಾರ್ತಾ ಮತ್ತು ಪ್ರಚಾರ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಡಿ. ದೇವರಾಜ ಅರಸು ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಏರ್ಪಡಿಸಲಾದ ಸಮತಾ ಸಮಾಜ ನಾಯಕತ್ವ ನಿರ್ಮಾಣ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಅರಸು ಅವರ ಅಧಿಕಾರಾವಧಿಯಲ್ಲಿ ದ.ಕ ಜಿಲ್ಲೆಗೆ ಸಾಕಷ್ಟು ಅನುಕೂಲವಾಗಿದೆ. ಕುಮ್ಕಿ ಹಕ್ಕನ್ನು ರದ್ದುಗೊಳಿಸಿ ನಿರ್ಗತಿಕರಿಗೆ, ಯೋಧರಿಗೆ ನೀಡಿದರೆ ದೇವರಾಜು ಅವರ ಆತ್ಮಕ್ಕೆ ಶಾಂತಿ ಸಿಗಬಹುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಸಿ.ಎಸ್.ದ್ವಾರಕನಾಥ್, ಶಾಸಕರಾದ ಜೆ.ಆರ್.ಲೋಬೊ, ಮೊಯ್ದಿನ್ ಬಾವ, ಮೂಡ ಅಧ್ಯಕ್ಷ ಕೋಡಿಜಾಲ್ ಇಬ್ರಾಹೀಂ, ಮನಪಾ ಆಯುಕ್ತ ಮುಹಮ್ಮದ್ ನಝೀರ್, ದ.ಕ ಜಿ.ಪಂ.ಉಪಾಧ್ಯಕ್ಷೆ ಕಸ್ತೂರಿ ಪಂಜ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಮುಹಮ್ಮದ್ ಹನೀಫ್ , ದ.ಕ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಯಣ್ಣ ಎಚ್, ಡಿ., ದೇವರಾಜ ಅರಸು ಜನ್ಮ ಶತಮಾನೋತ್ಸವ ಕಾರ್ಯಕಾರಿ ಸಮಿತಿಯ ದ.ಕ ಮತ್ತು ಉಡುಪಿ ಜಿಲ್ಲಾ ಸಂಚಾಲಕ ಎಸ್.ವಿ.ಅಮೀನ್, ಡಿ.ದೇವರಾಜ ಅರಸು ಜನ್ಮ ಶತಮಾನೋತ್ಸವ ಕಾರ್ಯಕಾರಿ ಸಮಿತಿಯ ಸದಸ್ಯ ಪ್ರೊ.ಶಿವರಾಮ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News