ಭಟ್ಕಳ:ಮದ್ಯ ಮಳಿಗೆಗೆ ಗ್ರಾಮ ಪಂಚಾಯತ್ ಸಭೆಯಲ್ಲಿ ತೀವ್ರ ವಿರೋಧ
ಭಟ್ಕಳ,ಆ.14: ತಾಲೂಕಿನ ಶಿರಾಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ತಟ್ಟಿ ಹಕ್ಕಲ್‌ನಲ್ಲಿ ಉದ್ದೇಶಿತ ಎಮ್‌ಎಸ್‌ಐಎಲ್ ಮದ್ಯದ ಮಳಿಗೆಯನ್ನು ತೆರೆಯಲು ಗ್ರಾಮಸ್ಥರು ಶಿರಾಲಿ ಪಂಚಾಯತ್ ಗ್ರಾಮ ಸಭೆಯಲ್ಲಿ ತೀವ್ರ ವಿರೋಧಪಡಿಸ್ದಿಾರೆ.
ಸಭೆಯ ಮಧ್ಯೆ ವಿಷಯವನ್ನು ಪ್ರಸ್ತಾಪಿಸಿದ ಗ್ರಾಮಸ್ಥರು, ಇಲ್ಲಿನಅಬಕಾರಿ ಅಧಿಕಾರಿಗಳು ಹಿರಿಯ ಅಧಿಕಾರಿಗಳಿಗೆ ತಪ್ಪು ಮಾಹಿತಿ ನೀಡಿದ್ದಾರೆ.ಅಬಕಾರಿ ಅಧಿಕಾರಿಗಳು ಸಭೆಗೆ ಬಂದು ನಮ್ಮ ಪ್ರಶ್ನೆಗೆ ಉತ್ತರಿಸಬೇಕು ಎಂದು ಆಗ್ರಹಿಸಿದರು.ಇದಕ್ಕೆ ಪ್ರತಿಕ್ರಿಯಿಸಿದ ಪಂಚಾಯತ್ ಅಧ್ಯಕ್ಷ ವೆಂಕಟೇಶ ನಾಯ್ಕ್ ಈ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಪರಿಹರಿಸುವ ಬಗ್ಗೆ ಭರವಸೆ ನೀಡಿದರು.ತಟ್ಟಿ ಹಕ್ಕಲ್‌ನಲ್ಲಿ ಕಟ್ಟು ಒಡೆದು ಹೋಗಿ ನೀರು ಕೃಷಿ ಭೂಮಿಗೆ ನುಗ್ಗಿ ಅಪಾರ ಹಾನಿಯಾಗಿದೆ. ಇಷ್ಟಾದರೂ ಚಿಕ್ಕ ನೀರಾವರಿ ಇಲಾಖೆಯ ಅಧಿಕಾರಿಗಳು ಭಟ್ಕಳಕ್ಕೆ ಭೇಟಿ ನೀಡಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದರು.ಈ ಬಗ್ಗೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳ ಗಮನ ಸೆಳೆಯಲು ತೀರ್ಮಾನಿಸಲಾಯಿತು.ಇದಕ್ಕೂ ಪೂರ್ವದಲ್ಲಿ ಗ್ರಾಮಸ್ಥರೇ ಗ್ರಾಮ ಸಭೆಯನ್ನು ಉದ್ಘಾಟಿಸಿ ವಿಶೇಷತೆಯನ್ನು ಮೆರೆದರು.ಪಂಚಾಯತ್ ಉಪಾಧ್ಯಕ್ಷೆ ಸುಮಿತ್ರಾ, ತಾಲೂಕು ಪಂಚಾಯತ ಸದಸ್ಯೆ ಮಾಲತಿದೇವಡಿಗ ಮುಂತಾದವರು ಉಪಸ್ಥಿತರಿದ್ದರು.