×
Ad

ದಮಾಮ್: ಸೋಶಿಯಲ್ ಫೋರಂನಿಂದ ಸ್ವಾತಂತ್ರೋತ್ಸವ

Update: 2016-08-14 20:30 IST

ದಮಾಮ್, ಆ.14: ಭಾರತದ 70ನೆ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಇಂಡಿಯನ್ ಸೋಶಿಯಲ್ ಫೋರಂ ಕರ್ನಾಟಕ ರಾಜ್ಯ ಸಮಿತಿಯು ಅನಿವಾಸಿ ಭಾರತೀಯರಿಗಾಗಿ ಆ.15ರಂದು ರಾತ್ರಿ 8:30ಕ್ಕೆ ದಮಾಮ್ನ ಹೋಟೆಲ್ ಪ್ಯಾರಗನ್ ಸಭಾಂಗಣದಲ್ಲಿ ಸಾರ್ವಜನಿಕ ಸ್ವಾತಂತ್ರ ಕಾರ್ಯಕ್ರಮ ಹಮ್ಮಿಕೊಂಡಿದೆ.

ಕಾರ್ಯಕ್ರಮದಲ್ಲಿ ವಿವಿಧ ಸಾಮಾಜಿಕ ಸೇವಾ ಸಂಘಸಂಸ್ಥೆಗಳ ಪದಾಧಿಕಾರಿಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಇದೇ ವೇಳೆ ಇತ್ತೀಚೆಗೆ ನಡೆದ ಇಂಡೆಪೆಂಡೆನ್ಸ್ ಕಪ್ ಕ್ರಿಕೆಟ್-2016’’ ಪಂದ್ಯಾವಳಿಯ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಗುವುದು.ಕಾರ್ಯಕ್ರಮದ ಪ್ರಯುಕ್ತ ಸಾರ್ವಜನಿಕರಿಗೆ ಔತಣಕೂಟ ಏರ್ಪಡಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

  ಮಂಗಳೂರು, ಆ.14: ದುಬೈನ ಬ್ಯಾರೀಸ್ ಕಲ್ಚರಲ್ ಫೋರಂ (ಬಿಸಿಎಫ್) ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ವಿಕಲಚೇತನರಿಗೆ ಗಾಲಿ ಕುರ್ಚಿ ಮತ್ತು ಬಡ ಮಹಿಳೆಯರಿಗೆ ಸ್ವಉದ್ಯೋಗಕ್ಕಾಗಿ ಹೊಲಿಗೆ ಯಂತ್ರಗಳ ವಿತರಣೆ ಕಾರ್ಯಕ್ರಮ ರವಿವಾರ ನಗರದ ಸೈಂಟ್ ಅಲೋಶಿಯಸ್ ಕಾಲೇಜಿನ ಲೊಯೊಲಾ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಬಿ.ಎ.ಮೊಯ್ದಿನ್ ಬಾವ, ಪ್ರಸಕ್ತ ದಿನಗಳಲ್ಲಿ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಶಿಕ್ಷಣ ಪಡೆಯುವುದು ಕಷ್ಟಕರವಾಗಿದೆ. ಈ ಹಿನ್ನೆಲೆಯಲ್ಲಿ ಬಿಸಿಎಫ್‌ನಂತಹ ಸಂಘಟನೆಗಳು ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೀಡುತ್ತಿರುವ ಪ್ರೋತ್ಸಾಹ ಶ್ಲಾಘನೀಯ ಎಂದರು.

 ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಶೈಕ್ಷಣಿಕವಾಗಿ ಬಲಿಷ್ಠವಾದರೆ ಮಾತ್ರ ಆರ್ಥಿಕವಾಗಿ ಬಲಿಷ್ಠವಾಗಲು ಸಾಧ್ಯ. ಆದ್ದರಿಂದ ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಿಸಿಎಫ್ ಅಧ್ಯಕ್ಷ ಡಾ.ಬಿ.ಕೆ.ಯೂಸುಫ್, ವಿದ್ಯಾರ್ಥಿ ವೇತನ ನೀಡುತ್ತಿರುವುದರಿಂದ ಹಲವಾರು ವಿದ್ಯಾರ್ಥಿಗಳಗೆ ಅನುಕೂಲವಾಗಿದೆ ಎಂದರು

ಮುಖ್ಯ ಭಾಷಣ ಮಾಡಿದ ಫಿಝಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಬಿ.ಎಂ.ಫಾರೂಕ್, ಸಮುದಾಯದ ಅಭಿವೃದ್ಧಿ ಗೆ ಶಿಕ್ಷಣ ಅಗತ್ಯ. ಮುಸ್ಲಿಮ ಹೆಣ್ಣು ಮಕ್ಕಳು ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ. ಅದೆ ರೀತಿ ಸಮುದಾಯದ ಗಂಡು ಮಕ್ಕಳು ಉನ್ನತ ಶಿಕ್ಷಣದ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಬೇಕಾಗಿದೆ ಎಂದು ಹೇಳಿದರು.

ಇದೇ ವೇಳೆ ಜುಬೈಲ್‌ನ ಅಲ್ ಮುಝೈನ್ ಕಂಪೆನಿಯ ಮುಖ್ಯಸ್ಥ ಝಕರಿಯಾ ಜೋಕಟ್ಟೆಯವರಿಗೆ ‘ಸ್ಟಾರ್ ಆಫ್ ಬ್ಯಾರೀಸ್-2016’ ಪ್ರಶಸ್ತಿ ಹಾಗೂ ಓಶಿಯನ್ ಕನ್‌ಸ್ಟ್ರಕ್ಷನ್ ಇಂಡಿಯಾ ಪ್ರೈ ಲಿ.ನ ನಿರ್ದೇಶಕ ಇನಾಯತ್ ಅಲಿಯವರಿಗೆ ಯುವ ಉದ್ಯಮಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಝಕರಿಯಾ ಜೋಕಟ್ಟೆ, 2006ರಲ್ಲಿ ತನಗೆ ದುಬೈ ಅವಾರ್ಡ್ ನೀಡಲಾಗಿತ್ತು. ಇದೀಗ ಈ ಗೌರವ ಸಿಕ್ಕಿರುವುದು ಸಂತಸ ತಂದಿದೆ. ಅನಿವಾಸಿ ಬ್ಯಾರಿ ಸಮುದಾಯದವರು ಶಿಕ್ಷಣಕ್ಕೆ ಉತ್ತೇಜನ ನೀಡುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

 ಎಸೆಸೆಲ್ಸಿ ಹಾಗೂ ಪಿಯುಸಿ ತರಗತಿಯ ಮೂರು ವಿಭಾಗಳಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿದ ಒಂಬತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ, ಬಿ.ಇ.ಯಲ್ಲಿ ಸಾಧನೆಗೈದ ಓರ್ವ ವಿದ್ಯಾರ್ಥಿ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ಓರ್ವ ಕ್ರೀಡಾಪಟುವಿಗೆ ಬಿಸಿಎಫ್ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇದೇ ಸಂದರ್ಭ ಹೊಲಿಗೆಯಂತ್ರ ಮತ್ತು ಗಾಲಿ ಕುರ್ಚಿಯನ್ನು ವಿತರಿಸಲಾಯಿತು.

      

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ, ಉಪಾಧ್ಯಕ್ಷ ಅತೀಕ್ ಹುಸೈನ್, ಸದಸ್ಯ ಉಸ್ಮಾನ್ ಮೂಳೂರು, ಮುಕ್ಕ ಸೀ ಫುಡ್‌ನ ಆಡಳಿತ ನಿರ್ದೇಶಕ ಮುಹಮ್ಮದ್ ಹಾರಿಸ್, ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್‌ನ ಸ್ಥಾಪಕಾಧ್ಯಕ್ಷ ಅಬ್ದುರ್ರವೂಫ್ ಪುತ್ತಿಗೆ, ಮಂಗಳೂರು ವಿವಿ ರಿಜಿಸ್ಟ್ರಾರ್ (ಮೌಲ್ಯಮಾಪನ) ಡಾ.ಎ.ಎಂ.ಖಾನ್, ಬರ್ಶ ಇಂಟರ್‌ನ್ಯಾಷನಲ್ ಗ್ರೂಪ್‌ನ ಆಡಳಿತ ನಿರ್ದೇಶಕ ಫತಾವುಲ್ಲಾ ಸಾಹೇಬ್ ತೋನ್ಸೆ, ಧರಹ್ಮಾ ಗ್ರೂಪ್‌ನ ಎಂ.ಡಿ. ಶೇಖ್ ಶರೀಫ್, ಡಿಕೆಎಸ್‌ಸಿ ಕೆ.ಎಸ್.ಎ. ಅಧ್ಯಕ್ಷ ಅಬ್ದುಲ್ ಹಮೀದ್, ಬಿಲ್ಲವ ಅಸೋಸಿಯೇಶನ್ ದುಬೈ ಇದರ ಅಧ್ಯಕ್ಷ ಸತೀಶ್ ಪೂಜಾರಿ, ಬಿಸಿಎಫ್ ವಿದ್ಯಾರ್ಥಿ ವೇತನ ಸಮಿತಿಯ ಅಧ್ಯಕ್ಷ ಎಂ.ಇ.ಮೂಳೂರು, ಮುಡಾ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್, ಯೆನೆಪೊಯ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಡಾ.ಗುಲಾಂ ಜೀಲಾನಿ, ಜೆಡಿಎಸ್ ಮುಖಂಡ ಹೈದರ್ ಪರ್ತಿಪ್ಪಾಡಿ, ದ.ಕ. ಮತ್ತು ಉಡುಪಿ ಜಿಲ್ಲಾ ಮುಸ್ಲಿಮ್ ಎಜ್ಯುಕೇಶನಲ್ ಇನ್‌ಸ್ಟಿಟ್ಯೂಶನ್ಸ್ ಫೆಡರೇಶನ್‌ನ ಅಧ್ಯಕ್ಷ ಮುಹಮ್ಮದ್ ಬ್ಯಾರಿ ಎಡಪದವು, ಎಸ್‌ಬಿಐ ಎನ್ ಆರ್ ಐ ಬ್ಯಾಂಕಿನ ಮೆನೆಜರ್ ರಹ್ಮತ್ ಅಲಿ, ಕೆಪಿಸಿ ಸದಸ್ಯ ಎಂ.ಬಿ.ನೂರ್ ಮುಹಮ್ಮದ್ ಮುಲ್ಕಿ, ಪಿ.ಸಿ.ಬಾವ, ವಿಟ್ಲ ಖಾದರ್, ಎಂ.ಕೆ.ಅಬ್ದುಲ್ ಖಾದರ್, ಬಿ.ಎಚ್.ಖಾದರ್, ಮೂಸಬ್ಬ, ಮುಹಮ್ಮದ್ ಮುಬೀನ್ ಜುಬೈಲ್, ಎಂ.ಕೆ.ಜಲೀಲ್, ಸಿ.ಆರ್.ಅಬೂಬಕರ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು. ಬಿಸಿಎಫ್‌ನ ಪೋಷಕ ಬಿ.ಎಂ. ಮುಮ್ತಾಝ್ ಅಲಿ ಸ್ವಾಗತಿಸಿದರು. ಅಬ್ದುಲ್ಲತೀಫ್ ಮುಲ್ಕಿ ವಂದಿಸಿದರು. ಡಾ.ಕಾಪು ಮುಹಮ್ಮದ್ ಕಾರ್ಯಕ್ರಮ ನಿರೂಪಿಸಿದರು.

 ಕಾರ್ಯಕ್ರಮದಲ್ಲಿ 650 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, 20 ಮಂದಿ ವಿಕಲಚೇತನರಿಗೆ ಗಾಲಿಕುುರ್ಚಿ ಮತ್ತು 15 ಮಂದಿಗೆ ಸ್ವ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರಗಳು ಸೇರಿ ಒಟ್ಟು 28 ಲಕ್ಷ ರೂ. ಮೊತ್ತದ ಸವಲತ್ತುಗಳನ್ನು ವಿತರಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News