ಮಣಿಪಾಲ ಎಂಐಟಿ ವಿದ್ಯಾರ್ಥಿ ಆತ್ಮಹತ್ಯೆ
Update: 2016-08-14 21:58 IST
ಮಣಿಪಾಲ, ಆ.14: ಮಣಿಪಾಲ ಎಂಐಟಿ ವಿದ್ಯಾರ್ಥಿಯೊಬ್ಬ ಕಾಲೇಜಿನ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.13ರಂದು ರಾತ್ರಿ ವೇಳೆ ನಡೆದಿದೆ.
ಮೃತರನ್ನು ಎಂಐಟಿ ಇಂಜಿನಿಯರಿಂಗ್ ಕಾಲೇಜಿನ ಬಿಟೆಕ್ ವಿದ್ಯಾರ್ಥಿ ಆದಿತ್ಯ ಇಶಾನ್ ಎಂದು ಗುರುತಿಸಲಾಗಿದೆ. ಈತ ವೈಯಕ್ತಿಕ ಕಾರಣದಿಂದ ಮನನೊಂದು ಹಾಸ್ಟೆಲ್ ರೂಮಿನ ಫ್ಯಾನಿನ ಹುಕ್ಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಇದನ್ನು ಕಂಡ ಇತರ ವಿದ್ಯಾರ್ಥಿಗಳು ಕೂಡಲೇ ಆತನನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದರು. ಆದರೆ ಆತ ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟನು. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.